ಕರಾವಳಿಯಲ್ಲಿ 61 ದಿನ ಮೀನುಗಾರಿಕೆ ನಿಷೇಧ – Vishwanews24

Featured, ಉಡುಪಿ, ದಕ್ಷಿಣ ಕನ್ನಡ

ಕರಾವಳಿಯಲ್ಲಿ ಜೂ. 1ರಿಂದ ಜು. 31ರ ವರೆಗೆ 61 ದಿನ ಮೀನುಗಾರಿಕೆ ನಿಷೇಧ

ಮಂಗಳೂರು/ಉಡುಪಿ: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟರೀ ಕೃತ ದೋಣಿ ಹಾಗೂ ಸಾಂಪ್ರ ದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್‌ 1ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ಎಂಜಿನ್‌ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಮೀನುಗಾರಿಕೆ ನಿಷೇಧದ ಸರಕಾರದ ಆದೇಶವನ್ನು ಉಲ್ಲಂಘಿಸುವ ದೋಣಿಗಳು ಮತ್ತು ಮೀನು ಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷದ ಅವಧಿಗೆ ಡೀಸೆಲ್‌ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.

ಕರಾವಳಿಯ ಎಲ್ಲ ಮೀನುಗಾರರ ಹಿತದೃಷ್ಟಿ ಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲ ಮೀನು ಗಾರರು ಈ ಆದೇಶವನ್ನು ಪಾಲಿಸಿ ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply