ಕರಾವಳಿ ಜನರ ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ : ಪರಮೇಶ್ವರ್ – vishwanews24
ಕರಾವಳಿ ಜನರ ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ : ಪರಮೇಶ್ವರ್
ಬೆಂಗಳೂರು : ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಅಲ್ಲಿನ ಜನರು ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಆಪೇಕ್ಷೆ ಮೇರೆಗೆ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ. ಕಳೆದ ಬಾರಿ ಭೇಟಿ ನೀಡಿದಾಗ ಅಧಿಕಾರಿಗಳನ್ನು ಬದಲಾಯಿಸುವಂತೆ ಒತ್ತಾಯಿಸಿದ್ದರು. ಕೂಡಲೇ ಬದಲಾಯಿಸುವುದು ಸರಿಯಲ್ಲ ಎಂಬ ಕಾರಣಕ್ಕೆ ವರ್ಗಾವಣೆ ಮಾಡಿರಲಿಲ್ಲ. ಈ ಬಾರಿಯೂ ಧ್ವನಿ ಎತ್ತಿದ್ದರಿಂದ ಬದಲಾಯಿಸಿದ್ದೇವೆ ಎಂದರು.
ಕುಡುಪು ಆಶ್ರಫ್ ಗುಂಪು ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು – vishwanews24
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಯಾರು ಏನೇ ಹೇಳಿದರು, ನಾವು ಇದನ್ನು ಸಹಿಸುವುದಿಲ್ಲ. ಆ ಭಾಗದಲ್ಲಿ ಶಾಂತಿ ನೆಲೆಸಬೇಕು. ದಕ್ಷಿಣ ಕನ್ನಡ ಜಿಲ್ಲೆ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮಾದರಿಯಾಗಿರುವ ಜಿಲ್ಲೆ. ಯಾರು ಶಾಂತಿ ಕದಡುವುದಕ್ಕೆ ಪ್ರಯತ್ನಿಸುತ್ತಾರೆ, ಅವರನ್ನು ಬಿಡುವುದಿಲ್ಲ ಎಂದು ಎಚ್ಚರಿಸಿದರು. ಅಧಿಕಾರಿಗಳನ್ನು ಅನಿವಾರ್ಯವಾಗಿ ಬದಲಾಯಿಸಬೇಕಾದ ಪರಿಸ್ಥಿತಿ ಬಂದಿದ್ದರಿಂದ ಮಂಗಳೂರು ಪೊಲೀಸ್ ಕಮಿಷನರ್, ದಕ್ಷಿಣ ಕನ್ನಡ ಎಸ್ಪಿ, ಉಡುಪಿ ಎಸ್ಪಿಯನ್ನು ಬದಲಾಯಿಸಿದ್ದೇವೆ. ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಈಗಾಗಲೇ ಅವರಿಗೆ ಸೂಚನೆ ಕೊಟ್ಟಿದ್ದೇವೆ. ಮುಂದೆ ಇದನ್ನು ನಡೆಯುವುದಕ್ಕೆ ಬಿಡುವುದಿಲ್ಲ. ಜನಸಮುದಾಯವು ಇದಕ್ಕೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.
ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆಗೆ ಕಾಲಾವಕಾಶ ಬೇಕಾಗಿತ್ತು. ನಿನ್ನೆ ಡಿಜಿಯವರೊಂದಿಗೆ ಚರ್ಚಿಸಿದ್ದೇನೆ. ಕಾರ್ಯಪಡೆಯನ್ನು ಯಾವ ರೀತಿ ನಿಯೋಜಿಸಬೇಕು. ಅವರಿಗೆ ನೀಡಬೇಕಾದ ಅಧಿಕಾರದ ಬಗ್ಗೆ ಚರ್ಚಿಸಲಾಗಿದೆ. ಉಡುಪಿ, ಮಂಗಳೂರು ಮತ್ತು ಶಿವಮೊಗ್ಗದಲ್ಲಿ ನಿಯೋಜಿಸುತ್ತೇವೆ ಎಂದರು.
ಪ್ರಚೋದನಾಕಾರಿ ಭಾಷಣಗಳಿಗೆ ಕಡಿವಾಣ ಹಾಕುತ್ತೇವೆ. ಈಗ ಇರುವ ಕಾನೂನು ಚೌಕಟ್ಟಿನಲ್ಲಿ ಮಾಡಬೇಕಾಗುತ್ತದೆ. ಇಂತಹ ಪ್ರಕರಣಗಳಿಗೆ ಕೋರ್ಟ್ಗಳಲ್ಲಿ ಅನೇಕ ಸಂದರ್ಭಗಳಲ್ಲಿ ತಡೆ ನೀಡುತ್ತಾರೆ. ಅಥವಾ ರದ್ದುಗೊಳಿಸುತ್ತಾರೆ. ಇದೆಲ್ಲವನ್ನು ನೋಡಿಕೊಂಡು ಮಾಡಬೇಕಾಗುತ್ತದೆ. ಸೋಷಿಯಲ್ ಮೀಡಿಯಾದಲ್ಲಿನ ಅನವಶ್ಯಕ ಪೋಸ್ಟ್ಗಳನ್ನು ನಿಯಂತ್ರಣ ಮಾಡುತ್ತೇವೆ ಎಂದರು ಹೇಳಿದರು.
