ಕರಾವಳಿ ಸಹಿತ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24
ಕರಾವಳಿ ಸಹಿತ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು ಹಾಗೂ ರಾಮನಗರದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇನ್ನೂ, ಕರಾವಳಿ ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಶಿವಕುಮಾರ್ ನಾಮಪತ್ರ ಅಂಗೀಕಾರ – Vishwanews24
ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಜನರು ಕಂಗೆಟ್ಟಿದ್ದು, ಮುಂದಿನ 48 ಗಂಟೆಗಳಲ್ಲಿ ಮಳೆ ಬರುವ ನಿರೀಕ್ಷೆಯಿದ್ದು, ಜನರು ನಿಟ್ಟುಸಿರುಬಿಡುವಂತಾಗಿದೆ.
