ಕರ್ನಾಟಕ ಅಭಿವೃದ್ಧಿಗೆ ವಿರೋಧಿ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ : ಡಿ.ಕೆ.ಶಿ ವಾಗ್ದಾಳಿ – vishwanews24

Featured, ರಾಜ್ಯ ನ್ಯೂಸ್

ಕರ್ನಾಟಕ ಅಭಿವೃದ್ಧಿ ವಿರೋಧಿ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ : ಡಿ.ಕೆ.ಶಿ ವಾಗ್ದಾಳಿ

ಬೆಂಗಳೂರು: ಕರ್ನಾಟಕ ಅಭಿವೃದ್ಧಿ ವಿರೋಧಿ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸುರಂಗ ರಸ್ತೆ ನಿರ್ಮಾಣಕ್ಕೆ ಎಷ್ಟು ಮಂದಿ ಗುತ್ತಿಗೆದಾರರು ಟೆಂಡರ್ ಅರ್ಜಿ ಹಾಕಿದ್ದಾರೆ ಎಂದು ಒಂದೆರಡು ದಿನಗಳಲ್ಲಿ ತಿಳಿಯುತ್ತದೆ. ನಮ್ಮ ಸುರಂಗ ರಸ್ತೆಯ ಸ್ವರೂಪ, ಗಾತ್ರದ ಬಗ್ಗೆ ಕೇಂದ್ರ ಸಚಿವ ನಿತೀನ್ ಗಡ್ಕರಿ, ಮುಂಬೈ, ದಿಲ್ಲಿ, ಪುಣೆಯವರು ಬಹಳ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದರು.

ಉಡುಪಿ: ಮಣ್ಣಪಳ್ಳ ಕೆರೆ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಲು ಯಶ್ಪಾಲ್ ಸುವರ್ಣ ಆಗ್ರಹ – vishwanews24

ಬೆಂಗಳೂರಿನಲ್ಲಿ ಶೇ.50ರಷ್ಟು ಭಾಗ ಕಲ್ಲಿದೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೆ ನಾವು ಮೆಟ್ರೋ ಯೋಜನೆ ಮಾಡಿದ್ದೇವೆ. ಮೆಟ್ರೋ ಶೇ.50ರಷ್ಟು ಮಾರ್ಗ ಸುರಂಗ ರೂಪದಲ್ಲಿದೆ. ಆಗ ಯಾರೂ ಮಾತನಾಡಲಿಲ್ಲ. ನಾವು ನಮ್ಮ ಕರ್ತವ್ಯ ಮಾಡುತ್ತೇವೆ. ಬೇರೆ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಇದು ನನಗಾಗಿ ಮಾಡುತ್ತಿರುವ ಯೋಜನೆಯಲ್ಲ. ಇದು ಮುಂದಿನ ಪೀಳಿಗೆಯ ಭವಿಷ್ಯಕ್ಕೆ, ಬೆಂಗಳೂರಿಗಾಗಿ ಎಂದು ಅವರು ತಿರುಗೇಟು ನೀಡಿದರು.

ಮುಂಬೈ, ಪುಣೆಯಲ್ಲಿ ಸುರಂಗ ರಸ್ತೆ ಮಾಡಿದ್ದಾರೆ. ಅಲ್ಲಿ ಎಲ್ಲವೂ ಸರಿಯಾಗಿದೆ. ಕರ್ನಾಟಕದಲ್ಲಿ ಏನೆ ಮಾಡಲು ಹೋದರೂ ವಿರೋಧ ಮಾಡುತ್ತಿದ್ದಾರೆ. ನಾನು ವಿಧಾನಸೌಧದಲ್ಲಿ ಬೆಂಗಳೂರಿನ ಶಾಸಕರನ್ನು ಸಭೆಗೆ ಕರೆದು ಸುರಂಗ ರಸ್ತೆ ವಿಚಾರದಲ್ಲಿ ಏನೇನು ಮಾಡಲು ಹೋರಟಿದ್ದೇನೆ ಎಂದು ಹೇಳಿದಾಗ, ಎಲ್ಲರೂ ಒಪ್ಪಿಕೊಂಡಿದ್ದರು ಎಂದು ಶಿವಕುಮಾರ್ ತಿಳಿಸಿದರು.

ದೆಹಲಿ ಬಾಂಬ್ ಸ್ಫೋಟ :  ಕಾರು ಚಲಾಯಿಸುತ್ತಿದ್ದುದು ಉಮರ್ ; ಡಿಎನ್​ಎ ಪರೀಕ್ಷೆಯಲ್ಲಿ ದೃಢ – vishwanews24

Leave a Reply