ಕರ್ನಾಟಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು ಬಜೆಟ್ ನಿರೂಪಿಸಿದೆ: ಸಚಿವ ಪ್ರಿಯಾಂಕ್ ಖರ್ಗೆ – vishwanews24
ಕರ್ನಾಟಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು ಬಜೆಟ್ ನಿರೂಪಿಸಿದೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಕರ್ನಾಟಕವು ಹಲವು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಮೂಲಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು 2025-26 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ ನಿರೂಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಮಂಗಳೂರು: ವೆನ್ಲಾಕ್ ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಸರಕಾರದ ಒಪ್ಪಿಗೆ: ಐವನ್ ಡಿಸೋಜಾ – vishwanews24
ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಚಿವರು, 2025-26ನೇ ಸಾಲಿನ ಈ ಆಯ-ವ್ಯಯವು ಕರ್ನಾಟಕದ ಭವ್ಯ ಭವಿಷ್ಯದ ದಿಕ್ಸೂಚಿಯಾಗಿ ಹೊರಹೊಮ್ಮಿದೆ. ಜನ ಕೇಂದ್ರೀತ ಅಭಿವೃದ್ಧಿಯ ಮಾದರಿಯನ್ನು ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಸಾಮಾಜಿಕ ಬಲವರ್ಧನೆಯ ಮೂಲಕ ಆರ್ಥಿಕ ಸುಸ್ಥಿರತೆ ಸಾಧಿಸುವಲ್ಲಿ ಮುನ್ನುಗ್ಗುತ್ತಿದೆ ಎಂದಿದ್ದಾರೆ.
ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಪರತೆಯನ್ನು ಪ್ರತಿಪಾದಿಸುವ ಕರ್ನಾಟಕ ಮಾದರಿಗೆ ದೇಶದಲ್ಲಷ್ಟೇ ಅಲ್ಲ, ಜಾಗತಿಕವಾಗಿಯೂ ಮನ್ನಣೆ ದೊರಕಿದೆ. ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿರುವ ಈ ಬಜೆಟ್ ಕರ್ನಾಟಕದ ಪ್ರಗತಿಯ ಔನತ್ಯಕ್ಕೆ ಕಾರಣವಾಗಲಿದೆ. ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡುವ ಕಾರ್ಯ ಯೋಜನೆಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. 2025-26ರ ಈ ಪ್ರಗತಿಪರ ಬಜೆಟ್ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಕರ್ನಾಟಕ ಮಾದರಿಯನ್ನು ಮತ್ತಷ್ಟು ಪ್ರಕಾಶಿಸುವಂತೆ ಮಾಡಲು ನಮ್ಮ ಸರ್ಕಾರ ಬದ್ಧತೆ ಹೊಂದಿದೆ ಎಂದು ಸಚಿವ ಖರ್ಗೆ ಹೇಳಿದ್ದಾರೆ.
ಹಲಾಲ್ ಬಜೆಟ್ ಎಂಬ ಟೀಕೆ – ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ : ಸಿದ್ದರಾಮಯ್ಯ – vishwanews24
