ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

Featured, ಉಡುಪಿ

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ 

ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶ ಖಂಡಿಸಿ ಕನ್ನಡ ಒಕ್ಕೂಟ ಸಂಘಟನೆಯು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ಯಾವುದೇ ಪ್ರತಿಕ್ರಿಯೆ ಅಥವಾ ಬೆಂಬಲ ವ್ಯಕ್ತವಾಗಿಲ್ಲ.

ಪ್ರತಿಭಟನೆ ನಡೆಸುವಂತೆ ಯಾವುದೇ ಕನ್ನಡಪರ ಸಂಘಟನೆಗಳು ಕರೆ ನೀಡಿಲ್ಲ. ರಾಜ್ಯ ರಸ್ತೆ ಸಾರಿಗೆ ಮತ್ತು ಖಾಸಗಿ ಬಸ್ ಗಳು ಎಂದಿನಂತೆ ಸಂಚರಿಸುತ್ತಿವೆ. ಸಾವಿರಾರು ಮಂದಿ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಎಲ್ಲಾ ರಸ್ತೆಗಳಲ್ಲೂ ವಾಹನ ದಟ್ಟಣೆ ಇದ್ದು, ಜನರು ತಮ್ಮ ಕೆಲಸ ಕಾರ್ಯಗಳಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ : 

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

 

ಅಂಗಡಿ, ಹೋಟೆಲ್ ಗಳು, ವಿವಿಧ ಕಚೇರಿಗಳು ಎಂದಿನಂತೆ ಕಾರ್ಯಾಚರಿಸುತ್ತಿವೆ. ಶಾಲಾ- ಕಾಲೇಜುಗಳಲ್ಲಿ ತರಗತಿಗಳು ನಡೆಯುತ್ತಿವೆ. ಬಂದ್ ಕರೆಯಿಂದ ಜನಜೀವನದ ಮೇಲೆ ಯಾವುದೇ ಪರಿಣಾಮ ಉಂಟಾಗಿಲ್ಲ.

Leave a Reply