ಕಲ್ಲು ತೂರುವ ಸಂಸ್ಕೃತಿ ಬಿಡಬೇಕು, ಇಲ್ಲದಿದ್ದರೆ ಕಲ್ಲು ತೂರುವವರ ಬಳಿಗೆ ಬುಲ್ಡೋಜರ್ ಬರಲಿದೆ : ಪ್ರತಾಪ್ ಸಿಂಹ  – Vishwanews24

Featured, ರಾಜ್ಯ ನ್ಯೂಸ್

ಕಲ್ಲು ತೂರುವ ಸಂಸ್ಕೃತಿ ಬಿಡಬೇಕು, ಇಲ್ಲದಿದ್ದರೆ ಕಲ್ಲು ತೂರುವವರ ಬಳಿಗೆ ಬುಲ್ಡೋಜರ್ ಬರಲಿದೆ : ಪ್ರತಾಪ್ ಸಿಂಹ 

ಮೈಸೂರು: ಮುಸ್ಲಿಮರ ಮನಸ್ಥಿತಿ ಬದಲಾಗಬೇಕಿದೆ. ಭಾರತದ ಮುಸ್ಲಿಮರನ್ನು ಮೆಕ್ಕಾ ಮದೀನಾದಿಂದ ಕರೆತಂದಿಲ್ಲ. ಮುಸ್ಲಿಮರಲ್ಲೂ ನಮ್ಮ ಡಿಎನ್‌ಎ ಇರುವುದು, ಅವರಲ್ಲೂ ನಮ್ಮದೇ ರಕ್ತ ಹರಿಯುತ್ತಿದೆ. ಕಲ್ಲು ತೂರುವ ಸಂಸ್ಕೃತಿ ಬಿಡಬೇಕು. ಇಲ್ಲದಿದ್ದರೆ ಕಲ್ಲು ತೂರುವವರ ಬಳಿಗೆ ಬುಲ್ಡೋಜರ್ ಬರಲಿದೆ. ಉತ್ತರ ಪ್ರದೇಶದಲ್ಲಿ ಇರುವಂತೆ ಇಲ್ಲಿಯೂ ಆಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ, ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಸೇರಿದಂತೆ ರಾಜ್ಯದ ವಿವಿಧೆಡೆ ಸಂಭವಿಸಿದ ಗಲಭೆಗಳಲ್ಲಿ ಮುಸ್ಲಿಮರ ಮನಸ್ಥಿತಿ ಹೇಗಿದೆ ಎಂದು ಗೊತ್ತಾಗಿದೆ. ಮುಸ್ಲಿಮರ ಮೆರವಣಿಗೆ ಮೇಲೆ ಹಿಂದೂಗಳು ಎಂದೂ ಕೂಡ ಕಲ್ಲು ತೂರಾಟ ನಡೆಸಿಲ್ಲ. ಆದರೆ ಹಿಂದೂಗಳ ಮೆರವಣಿಗೆ ಮೇಲೆ ಮುಸ್ಲಿಮರಿಂದ ಕಲ್ಲು ತೂರಾಟ ನಡೆಸಲಾಗಿದೆ. ಈ ವಿಚಾರದಲ್ಲಿ ಮುಸ್ಲಿಮರ ಮನಸ್ಥಿತಿ ಬದಲಾಗಬೇಕು ಎಂದರು.

ಕಲ್ಲು ಹೊಡೆಯುವುದು ಮುಸ್ಲಿಮರ ಸಂಸ್ಕೃತಿಯಾಗಿದೆ. ಕ್ರಿಶ್ಚಿಯನ್, ಪಾರ್ಸಿಗಳು ಸೇರಿದಂತೆ ಯಾವುದೇ ಧರ್ಮೀಯರು ಕಲ್ಲು ತೂರುವುದಿಲ್ಲ. ಮುಸ್ಲಿಮರು ಮಾತ್ರ ಅನ್ಯ ಧರ್ಮೀಯರ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿ ಅಂಗಡಿ ಮುಗ್ಗಟ್ಟನ್ನು ಬಂದ್ ಮಾಡಿದ್ದರಿಂದ ಸಮಸ್ಯೆ ಆರಂಭವಾಯಿತು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

‘ಬುಲ್ಡೋಜರ್ ಮಾದರಿ’ ಕಾರ್ಯಾಚರಣೆಯನ್ನು ಕರ್ನಾಟಕದಲ್ಲೂ ಜಾರಿಗೊಳಿಸಬೇಕು : ಎಂ.ಪಿ ರೇಣುಕಾಚಾರ್ಯ ಒತ್ತಾಯ – Vishwanews24

Leave a Reply