ಕಳೆದ 6 ವರ್ಷಗಳಿಂದ ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡಿ ಎಲ್ಲ ರೀತಿಯಲ್ಲೂ ದಿವಾಳಿಯನ್ನಾಗಿಸಿತ್ತು : ಸಿದ್ದರಾಮಯ್ಯಗೆ ಸಿಟಿ ರವಿ -Vishwanews24
ಬೆಂಗಳೂರು, : ಯಾವ್ಯಾವ ಮಾರ್ಗದಿಂದ ರಾಜ್ಯವನ್ನು ದರೋಡೆ ಮಾಡಬೇಕೋ ಕಾಂಗ್ರೆಸ್ ಆರು ವರ್ಷಗಳಿಂದ ಮಾಡಿದೆ ಎಂದು ಸಚಿವ ಸಿಟಿ ರವಿ ಟ್ವೀಟ್ ಮಾಡಿದ್ದಾರೆ.
ನೆರೆ ಪರಿಹಾರ ತಡವಾಗುತ್ತಿರುವ ಕಾರಣ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಹೀಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ್ದ ಟ್ವೀಟ್ಗೆ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಅವರೇ, ಕಳೆದ 6 ವರ್ಷ ನೀವು, ರಾಜ್ಯವನ್ನು ಲೂಟಿ ಮಾಡಿ ಎಲ್ಲ ರೀತಿಯಲ್ಲೂ ರಾಜ್ಯ ದಿವಾಳಿಯನ್ನಾಗಿಸಿತ್ತು. ಇದೀಗ ನೀವು ಯಾವ ಮುಖ ಇಟ್ಟುಕೊಂಡು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಟೀಕೆ ಮಾಡುತ್ತಿದ್ದೀರಿ ಅಲ್ಲದೆ ಅವರನ್ನು ರಾಜೀನಾಮೆ ಕೊಡಿ ಎಂದು ಕೇಳುತ್ತಿದ್ದೀರಿ. ನಿಮಗೆ ನಾಚಿಕೆ ಇಲ್ಲವಾ ಎಂದು ಗುಡುಗಿದ್ದಾರೆ.
ಇದಕ್ಕೂ ಮುನ್ನ ಸಿದ್ದರಾಮಯ್ಯ ಟ್ವೀಟ್ ಮಾಡಿ, ನಿಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಂಡ ನಂತರ ಒಂದು ಕ್ಷಣವೂ ಅಧಿಕಾರದಲ್ಲಿ ಇರುವುದು ಬೇಡ ಎಂದು ಹೇಳಿದ್ದರು. ಅದಕ್ಕೆ ತಿರುಗೇಟು ನೀಡಿರುವ ಸಿಟಿ ರವಿ ಅವರು ಮೊದಲು ಆರು ವರ್ಷ ನೀವೇನು ಮಾಡಿದ್ದೀರಾ ಎಂದು ನೋಡಿಕೊಳ್ಳಿ ಆಮೇಲೆ ಯಡಿಯೂರಪ್ಪ ಅವರ ವಿರುದ್ಧ ಮಾತನಾಡಿ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಲಿದೆ. ಕೇಂದ್ರದ ನಿಯಮಗಳ ಅನ್ವಯ ಬೆಳೆಹಾನಿ ಪರಿಹಾರ ನೀಡುತ್ತೇವೆ ಎಂದು ಯಡಿಯೂರಪ್ಪ ಉತ್ತರಿಸಿದ್ದರು.
