ಕಾಂಗ್ರೆಸ್ನಲ್ಲಿ ಇದ್ದುಕೊಂಡು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ; ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ -Vishwanews24
ಕಾಂಗ್ರೆಸ್ನಲ್ಲಿ ಇದ್ದುಕೊಂಡು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ; ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ
ನವದೆಹಲಿ : ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಿಂಧಿಯಾ ಕಮಲ ಪಕ್ಷವನ್ನು ಸೇರ್ಪಡೆಯಾದರು.
ಬಿಜೆಪಿ ಕುಟುಂಬಕ್ಕೆ ಸೇರಲು ತನಗೆ ಅವಕಾಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಆವರಿಗೆ ಜ್ಯೋತಿರಾದಿತ್ಯ ಸಿಂಧಿಯಾ ಧನ್ಯವಾದ ತಿಳಿಸಿದರು.
ಬಳಿಕ ಮಾತನಾಡಿದ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಈಗ ಕಾಂಗ್ರೆಸ್ ಪಕ್ಷ ಬದಲಾಗಿದೆ. ವಾಸ್ತವಕತೆಗೆ ಅದು ದೂರವಾಗಿದೆ. ಕಾಂಗ್ರೆಸ್ನಲ್ಲಿ ಇದ್ದುಕೊಂಡು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ ಎಂದರು.
