ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಮಾಜಿ ಸಿಎಂ ಅಶೋಕ್ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆ – Vishwanews24

Featured, ರಾಷ್ಟ್ರ ನ್ಯೂಸ್

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಮಾಜಿ ಸಿಎಂ ಅಶೋಕ್ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆ

ಮುಂಬಯಿ: ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷ ತೊರೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮುಂಬೈ ಬಿಜೆಪಿ ಕಚೇರಿಯಲ್ಲಿ ಸುಮಾರು ಮಧ್ಯಾಹ್ನ 12 ಗಂಟೆಗೆ ಚವಾಣ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಚವಾಣ್ ಅವರು ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರಿಗೆ ಕಳುಹಿಸಿದ್ದರು. ಇದರ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಚವಾಣ್ ತಮ್ಮ ಮುಂದಿನ ಹೆಜ್ಜೆಯ ಬಗ್ಗೆ ಒಂದೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು ಆದರೆ ಒಂದು ದಿನದ ಬಳಿಕವೇ ಅವರು ಬಿಜೆಪಿ ಸೇರುವ ನಿರ್ಧಾರಕ್ಕೆ ಬಂದಿದ್ದಾರೆ.

ಗಾಂಜಾ ಆರೋಪಿ ಮಹಿಳಾ ಪಿಎಸೈ ಮೇಲೆ  ಹಲ್ಲೆಗೆ ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಪಾಲಿಗೆ ತೀರ ದುರದೃಷ್ಟಕರ : ಯಶ್ಪಾಲ್ ಸುವರ್ಣ ಆಕ್ರೋಶ – Vishwanews24

ಉಪಮುಖ್ಯಮಂತ್ರಿ ಮತ್ತು ರಾಜ್ಯದ ಬಿಜೆಪಿಯ ಉನ್ನತ ನಾಯಕ ದೇವೇಂದ್ರ ಫಡ್ನವೀಸ್ ಅವರು ಚವಾಣ್ ಅವರನ್ನು ಪಕ್ಷಕ್ಕೆ ಸ್ವಾಗತಿಸಲಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಇಂದು ಬಿಜೆಪಿ ಪಕ್ಷ ಸೇರಲಿರುವ ಮಾಜಿ ಮುಖ್ಯಮಂತ್ರಿ ಚವಾಣ್ ಅವರಿಗೆ ರಾಜ್ಯಸಭಾ ಸ್ಥಾನ ನೀಡಬಹುದು ಎಂದು ಮೂಲಗಳು ಹೇಳುತ್ತಿವೆ.

Leave a Reply