ಕಾಂಗ್ರೆಸ್ ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯ: ಜಿ. ಪರಮೇಶ್ವರ್ ಹೇಳಿಕೆ – Vishwanews24
ಕಾಂಗ್ರೆಸ್ ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯ: ಜಿ. ಪರಮೇಶ್ವರ್ ಹೇಳಿಕೆ
ಬೆಂಗಳೂರು: ಚುನಾವಣೆಯಲ್ಲಿ ಗೆಲ್ಲುವ ಮುನ್ನ 5 ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಗ್ಯಾರೆಂಟಿಗಳಿಗೆ ಷರತ್ತು ವಿಧಿಸುವುದಾಗಿ ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಹಿಂದೆ ಷರತ್ತಿನ ಬಗ್ಗೆ ತಿಳಿಸದೇ ಎಲ್ಲರಿಗೂ ಉಚಿತ ಎಂದು ಕಾಂಗ್ರೆಸ್ ಹೇಳಿತ್ತು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಿ. ಪರಮೇಶ್ವರ್, ಕಾಂಗ್ರೆಸ್ ಗ್ಯಾರಂಟಿಗಳಿಗೆ ಕಂಡಿಷನ್ಸ್ ಇರುತ್ತದೆ. ಮೊದಲ ಕ್ಯಾಬಿನೆಟ್ನಲ್ಲೇ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಮೊದಲ ಕ್ಯಾಬಿನೆಟ್ನಲ್ಲಿ ಜಾರಿ ಮಾಡುತ್ತೇವೆ ಎಂದರು.
ಷರತ್ತುಗಳು ಇರುತ್ತವೆ
ಆಯಾ ಇಲಾಖೆ ಸಚಿವರು ಕೂತು ಗ್ಯಾರಂಟಿಗಳ ಬಗ್ಗೆ ವರ್ಕ್ ಮಾಡಿ ಜಾರಿ ಮಾಡುತ್ತೇವೆ. ಆದರೆ, ಗ್ಯಾರಂಟಿಗಳಿಗೆ ಷರತ್ತುಗಳು ಇರುತ್ತವೆ. ಸುಮ್ಮನೆ ಕೊಟ್ಟರೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಗ್ಯಾರಂಟಿಗಳಿಗೆ ಮಾನದಂಡ ಇರುತ್ತದೆ. ಷರತ್ತುಗಳನ್ನು ವಿಧಿಸಲಾಗುತ್ತದೆ ಎಂದು ಸೂಚನೆ ನೀಡಿದರು.
ಗ್ಯಾರಂಟಿಗಳನ್ನ ಪ್ರಾಕ್ಟಿಕಲ್ ಆಗಿ ಜಾರಿ ಮಾಡುತ್ತೇವೆ. ಆಯಾ ಇಲಾಖೆ ಸಚಿವರು ಕೂತು ಇದರ ಬಗ್ಗೆ ವರ್ಕ್ ಮಾಡಿ ಜಾರಿ ಮಾಡ್ತೀವಿ. ಆದರೆ ಗ್ಯಾರಂಟಿಗಳಿಗೆ ಕಂಡಿಷನ್ ಇರುತ್ತದೆ. ಹಾಗೇ ಕೊಟ್ಟರೆ ಸುಮ್ಮನೆ ಕೊಟ್ಟರೆ ಎಲ್ಲರೂ ತೆಗೆದುಕೊಳ್ಳುತ್ತಾರೆ ಎಂದರು
