ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾದ ಜಗದೀಶ್ ಶೆಟ್ಟರ್ – vishwanews24

Featured, ರಾಷ್ಟ್ರ ನ್ಯೂಸ್

ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾದ ಜಗದೀಶ್ ಶೆಟ್ಟರ್

ನವದೆಹಲಿ  : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ , ಬಿವೈ ವಿಜಯೇಂದ್ರ  ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿದ್ದ ಬ್ಯಾಗ್ ಕಳವು – vishwanews24

Leave a Reply