ಕಾಂಗ್ರೆಸ್ ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ : ವಾಟಾಳ್ ನಾಗರಾಜ್ – Vishwanews24
ನಾನು ಕೂಡ ಮೇಕೆದಾಟು ಯೋಜನೆ ಜಾರಿಗಾಗಿ ಹೋರಾಟ ಮಾಡುತ್ತೇನೆ..
ಕಾಂಗ್ರೆಸ್ ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ..
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಸ್ಥಿತ್ವದಲ್ಲಿ ಇದ್ದಾಗ ಯಾಕೆ ಯೋಜನೆ ಮಾಡಲಿಲ್ಲ…
ಈಗ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ..
ರಾಮನಗರ: ಜ.9ರಂದು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಗೆನಮ್ಮ ಬೆಂಬಲವಿಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ನಗರದಲ್ಲಿ ಇಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೇಕೆದಾಟು ಜನರಿಗೆ ನೀರು ಒದಗಿಸುವಂತ ಉತ್ತಮ ಯೋಜನೆಯಾಗಿದೆ. ಆ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಮೇಕೆದಾಟು ಯೋಜನೆ ಜಾರಿಗಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಮೇಕೆದಾಟು ಯೋಜನೆ ಜಾರಿಯಾಗಬೇಕು ಅಂದರು.
ಪುತ್ತೂರಿನಲ್ಲಿ ಬೃಹತ್ ಕೈಗಾರಿಕಾ ಕಾರಿಡಾರ್ ಸ್ಥಾಪನೆ – Vishwanews24
ನಾನು ಕೂಡ ಮೇಕೆದಾಟು ಯೋಜನೆ ಜಾರಿಗಾಗಿ ಹೋರಾಟ ಮಾಡುತ್ತೇನೆ. ಆದ್ರೇ ಕಾಂಗ್ರೆಸ್ ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ. ಇದೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಸ್ಥಿತ್ವದಲ್ಲಿ ಇದ್ದಾಗ ಯಾಕೆ ಯೋಜನೆ ಮಾಡಲಿಲ್ಲ.? ಈಗ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಜನವರಿ 9ರಿಂದ ಆರಂಭಿಸುತ್ತಿರುವಂತ ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಅವರ ಪಾಡಿಗೆ ಅವರು ಪಾದಯಾತ್ರೆ ಮಾಡಲಿ, ನಾವು ಬೆಂಬಲಿಸೋದಿಲ್ಲ. ಮುಂದಿನ ದಿನಗಳಲ್ಲಿ ನಾವು ಈ ಯೋಜನೆಗಾಗಿ ಉಗ್ರ ಚಳುವಳಿಯನ್ನೇ ಮಾಡೋದಾಗಿ ಘೋಷಿಸಿದರು.
