ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

Featured, ರಾಜ್ಯ ನ್ಯೂಸ್

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌

ಬೆಂಗಳೂರು: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಅಸಮಾಧಾನದ ನಡುವೆ ಶಾಸಕ ಪ್ರದೀಪ್ ಈಶ್ವರ್‌  ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ತಾವು ಯಾವುದೇ ಬಂಡಾಯ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತ. ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ, ಕಾಂಗ್ರೆಸ್ ನಮ್ಮ ಗರ್ಭಗುಡಿ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ನಮ್ಮ ನಾಯಕರು. ಸಾಮಾನ್ಯನಾದ ನನಗೆ ಪಕ್ಷ ಟಿಕೆಟ್ ನೀಡಿ ಶಾಸಕನನ್ನಾಗಿ ಮಾಡಿದೆ. ಮಧ್ಯಾಹ್ನ ನಡೆಯುವ ಸಭೆಗೆ ನಾನು ಹೋಗುವುದಿಲ್ಲ. ನಮ್ಮ ನಾಯಕರು ಏನು ಹೇಳುತ್ತಾರೋ ಅದನ್ನೇ ನಾನು ಪಾಲಿಸುತ್ತೇನೆ ಎಂದರು.

ಇದನ್ನೂ ಓದಿ:

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಜೈ ಕಾಂಗ್ರೆಸ್. ನಾನು ಇನ್ನೂ 30 ವರ್ಷ ಕಾಯಲು ಸಿದ್ಧನಿದ್ದೇನೆ. ನನಗೆ ವಯಸ್ಸಿದೆ, ಅವಕಾಶಕ್ಕಾಗಿ ಕಾಯುತ್ತೇನೆ. ಸಭೆ ನಡೆಸುತ್ತಿರುವವರಿಂದ ನನಗೆ ಯಾವುದೇ ಕರೆ ಬಂದಿಲ್ಲ. ನಾನು ಪಕ್ಷಕ್ಕೆ ನಿಷ್ಠನಾಗಿದ್ದೇನೆ. ಆದ್ದರಿಂದ ಆ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು.

ಸಚಿವ ಸ್ಥಾನ ಕುರಿತು ಮಾತನಾಡಿದ ಅವರು, ಮಂತ್ರಿ ಆಗಬೇಕು ಎಂಬ ಆಸೆ ಇರುವುದು ಸಹಜ. ಆದರೆ ಈಗಲೇ ಸಿಗಬೇಕು ಎಂಬ ಹಠ ಇಲ್ಲ. ಹಿರಿಯರಿಗೆ ಅವಕಾಶ ಸಿಕ್ಕಿದೆ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಇದನ್ನೂ ಓದಿ:

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

Leave a Reply