ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎ.ಪಿ. ಅಬ್ದುಲ್ಲಾ ಕುಟ್ಟಿ ಬಿಜೆಪಿಯತ್ತ -Vishwanews24

Featured, ರಾಷ್ಟ್ರ ನ್ಯೂಸ್

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡಿರುವ ಹಿರಿಯ ನಾಯಕ ಎ.ಪಿ. ಅಬ್ದುಲ್ಲಾ ಕುಟ್ಟಿ ಬಿಜೆಪಿಯತ್ತ ಮುಖ ಮಾಡಿದ್ದಾರೆ.

ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವ ಅಬ್ದುಲ್ಲಾ ಕುಟ್ಟಿ, ಇಬ್ಬರೂ ಪಕ್ಷಕ್ಕೆ ಆಹ್ವಾನಿಸಿದ್ದು, ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

2009 ರಲ್ಲಿ ಸಿಪಿಎಂ ನಾಯಕರಾಗಿದ್ದ ಎ.ಪಿ. ಅಬ್ದುಲ್ಲಾ ಕುಟ್ಟಿ ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರನ್ನು ಹೊಗಳಿದ ಕಾರಣಕ್ಕೆ ಉಚ್ಚಾಟನೆಗೊಂಡು, ನಂತರದಲ್ಲಿ ಕಾಂಗ್ರೆಸ್ ಸೇರಿದ್ದರು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೋದಿಯನ್ನು ಹೊಗಳಿದ ಕಾರಣಕ್ಕೆ ಅವರನ್ನು ಕಾಂಗ್ರೆಸ್ ಪಕ್ಷದಿಂದಲೂ ಉಚ್ಚಾಟಿಸಲಾಗಿತ್ತು.