ಕಾಂಗ್ರೆಸ್‌‍ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುವುದಿಲ್ಲ: ಡಿಕೆಶಿ – vishwanews24

Featured, ರಾಜ್ಯ ನ್ಯೂಸ್

ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣವಾಗಿದೆ  : ಡಿಕೆಶಿ

ಬೆಂಗಳೂರು, : ಕಾಂಗ್ರೆಸ್‌‍ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಬಿಬಿಎಂಪಿ ವತಿಯಿಂದ ಕಬ್ಬನ್‌ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಲು ಆರಂಭಿಸಿದರೆ ಅದು ಎಲ್ಲೆಲ್ಲಿಗೋ ಹೋಗುತ್ತದೆ. ನನಗೆ ಅದರ ನೋವು ಗೊತ್ತು. ನಾನು ಅನುಭವಿಸಿದ್ದೇನೆ ಎಂದು ಹೇಳಿದರು.

ಉಡುಪಿ: ಅಕ್ರಮ ಗೋ ಸಾಗಟ ಮತ್ತು ಗೋ ಹತ್ಯೆ ವಿರುದ್ಧ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಿ : ದಿನೇಶ್ ಮೆಂಡನ್ – vishwanews24

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ. ಹಿಂದಿನ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜಾಹೀರಾತು ನೀಡಿದ್ದು, ನಮ ಮೇಲೆ ಕೇಸು ದಾಖಲಿಸಲಿ, ಅದನ್ನು ಎದುರಿಸುತ್ತೇವೆ. ಆದರೆ ರಾಹುಲ್‌ಗಾಂಧಿಯವರನ್ನು ಮಧ್ಯಕ್ಕೆ ತರಲು ಅವರೇನು ಕೆಪಿಸಿಸಿ ಅಥವಾ ಎಐಸಿಸಿ ಅಧ್ಯಕ್ಷರಾಗಿದ್ದರೇ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕಾಮನ್‌ಸೆನ್‌್ಸ ಇರಲಿಲ್ಲವೇ? ಅವರ ಪಕ್ಷದ ಎಂಎಲ್‌ಸಿ ಮೂಲಕ ಕೇಸು ಹಾಕಿಸಿದ್ದೇಕೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌‍ನವರು ದ್ವೇಷ ರಾಜಕಾರಣ ಮಾಡುವುದಿಲ್ಲ. ರಾಹುಲ್‌ಗಾಂಧಿಯವರಿಗೆ ಅವರದ್ದೇ ಆದ ತೊಂದರೆಗಳಿವೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಮೂಗು ತೂರಿಸುವ ಅಗತ್ಯ ಅವರಿಗಿಲ್ಲ . ಕಾಂಗ್ರೆಸ್‌‍ನವರು ದ್ವೇಷ ಸಾಧಿಸಲು ನೀಚ ರಾಜಕಾರಣ ಮಾಡುವುದಿಲ್ಲ ಎಂದರು.2028ಕ್ಕೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷವನ್ನು ಮರಳಿ ಅಧಿಕಾರಕ್ಕೆ ತಂದೇ ತರುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲಾ ಸದಸ್ಯರು ಇದಕ್ಕಾಗಿ ಹಗಲು-ರಾತ್ರಿ ಕೆಲಸ ಮಾಡುತ್ತೇವೆ ಎಂದರು.

ರಕ್ಷಣೆಗಾಗಿ  ಠಾಣೆಗೆ ಪೊಲೀಸರು ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಕೆಶಿ ಸ್ಪಷ್ಟನೆ  – vishwanews24

ನಾವು ವಿಶ್ವಮಾನವರಾಗಲು ಸಮಾಜದ ಅಭಿಪ್ರಾಯ ಮುಖ್ಯ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಹಿನ್ನಡೆಯಾಗಿರುವುದು ಹಾಗೂ ಮತದಾನ ಏಕೆ ಈ ರೀತಿ ಆಗಿದೆ ಎಂಬುದರ ಕುರಿತು ನಿನ್ನೆ ರಾತ್ರಿ ಒಕ್ಕಲಿಗ ಮುಖಂಡರ ಸಭೆಯಲ್ಲಿ ದೊಡ್ಡ ಚರ್ಚೆಯಾಗಿದೆ ಎಂದು ಹೇಳಿದರು.

Leave a Reply