ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ ಕೊರೊನಾ ಪಾಸಿಟಿವ್ -Vishwanews24

Featured, ರಾಜ್ಯ ನ್ಯೂಸ್

ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ ಕೊರೊನಾ ಪಾಸಿಟಿವ್ -Vishwanews24

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನ ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಶಾಸಕಿ ಸೌಮ್ಯ ರೆಡ್ಡಿ, ನನಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಹತ್ತಿರದ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಜೊತೆಗೆ ಸಂಪರ್ಕದಲ್ಲಿದ್ದ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ :ಕೊರೊನಾ ಲಸಿಕೆ ಪಡೆದಿದ್ದ ಪರೇಶ್ ರಾವಲ್‍ಗೆ ಕೊರೊನಾ ಸೋಂಕು -Vishwanews24

ಕೋವಿಡ್ 2ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದು, ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಕೈಗೊಂಡು ಮಾಸ್ಕ್ ಧರಿಸಿ. ಎಲ್ಲರಿಗೂ ಲಸಿಕೆ ನೀಡುವ ವಿಧಾನವನ್ನು ತ್ವರಿತಗೊಳಿಸಬೇಕೆಂದು ನಾನು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಸಿ.ಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ : ಡಿ.ಕೆ.ಶಿ ಸ್ಪಷ್ಟನೆ -Vishwanews24