ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಡಲ್ಲ: ಸಿದ್ದರಾಮಯ್ಯ – Vishwanews24
ನವದೆಹಲಿ : ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳುವುದರ ಮೂಲಕ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಕ್ಷೇತ್ರ ಕಾಂಗ್ರೆಸ್ ನ ಪಾಲಾಗುವುದು ಖಚಿತ ಎನ್ನಲಾಗಿದೆ.
ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ‘ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಬೇಡಿ ಎಂದಿದ್ದೇನೆ. ವರಿಷ್ಠರಿಗೆ ಹಾಲಿ ಸಂಸದರಿಗೆ ಟಿಕೆಟ್ ನೀಡುವ ಬಗ್ಗೆ ಮಾತನಾಡಿದ್ದೇನೆ. ಸ್ಕ್ರೀನಿಂಗ್ ಸಮಿತಿ ಅಜೆಂಡಾ ಗೊತ್ತಿಲ್ಲ. ರಾಜ್ಯದಿಂದ ಪಟ್ಟಿ ಬಂದಿದೆ ಆ ಪಟ್ಟಿ ಆಧರಿಸಿ ಚರ್ಚೆ ನಡೆಸಿದ್ದೇನೆ. ಹಾಲಿ ಸಂಸದರ ಕ್ಷೇತ್ರಗಳು ಹೊರತು ಪಡಿಸಿ ಚರ್ಚೆ ಮಾಡುತ್ತೇವೆ’ ಎಂದು ಹೇಳಿದ್ದಾರೆ.
ಇದೇ ವೇಳೆ ಮಂಡ್ಯದಿಂದ ಸುಮಲತಾ ಅವರಿಗೆ ಸಿದ್ದರಾಮಯ್ಯ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಸುಮಲತಾಗೆ ಕಾಂಗ್ರೆಸ್ನಿಂದ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದ್ದೇ ನಾನು. ಅಲ್ಲಿನ ಸ್ಪರ್ಧೆಯ ಬಗ್ಗೆ ಈ ಮೊದಲೇ ನಿರ್ಧಾರವಾಗಿತ್ತು. ಹಾಗಿದ್ದಮೇಲೆ ನಾನ್ಯಾಕೆ ಸುಮಲತಾಗೆ ಪರೋಕ್ಷ ಬೆಂಬಲ ನೀಡುತ್ತೇನೆ? ಹಾಗೇನಾದರೂ ಇದ್ದಿದ್ದರೆ ನೇರವಾಗೇ ಹೇಳುತ್ತಿದ್ದೆ ಎಂದರು.
