ಕಾಂಗ್ರೆಸ್ ​ಪಕ್ಷ ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲಮನ್ನಾ ನಿಶ್ಚಿತ : ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿ

Featured, ರಾಷ್ಟ್ರ ನ್ಯೂಸ್
ನವದೆಹಲಿ: ಕಾಂಗ್ರೆಸ್​ ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ ಎಂದು ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ಗಾಂಧಿ ಹೇಳಿದ್ದಾರೆ.
ರಾಹುಲ್ ಛತ್ತೀಸ್​ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ಪ್ರಚಾರದ ವೇಳೆ ಭರವಸೆ ನೀಡಿದ್ದರು.
ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನೂ ಒಂದು ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್​ ಮತಯಾಚನೆ ಮಾಡಿತ್ತು. ಸಾಲಮನ್ನಾಕ್ಕಾಗಿ 3 ರಾಜ್ಯಗಳ ರೈತರು ಕಾಯುತ್ತಿದ್ದಾರೆ. ಶೀಘ್ರದಲ್ಲಿಯೇ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ.