ಕಾಂತಾರ ಕ್ಲೈಮ್ಯಾಕ್ಸ್​ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. : ರಿಷಬ್​ ಶೆಟ್ಟಿ ಚಿತ್ರಕ್ಕೆ ಹೃತಿಕ್​ ರೋಷನ್​ ಮೆಚ್ಚುಗೆ – VIshwanews24

Featured, ರಾಷ್ಟ್ರ ನ್ಯೂಸ್

ಕಾಂತಾರ ಸಿನಿಮಾ ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ, ಕ್ಲೈಮ್ಯಾಕ್ಸ್​ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. : ರಿಷಬ್​ ಶೆಟ್ಟಿ ಚಿತ್ರಕ್ಕೆ ಹೃತಿಕ್​ ರೋಷನ್​ ಮೆಚ್ಚುಗೆ

ದೇಶಾದ್ಯಂತ ಹೊಸ ಸಂಚಲನ ಮೂಡಿಸಿದ ‘ಕಾಂತಾರ’ ಚಿತ್ರದ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.  ಬಾಲಿವುಡ್​ನ ಖ್ಯಾತ ನಟ ಹೃತಿಕ್ ರೋಷನ್ ಅವರು ಕೂಡ ‘ಕಾಂತಾರ’ ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಚಿತ್ರದ ಕ್ಲೈಮ್ಯಾಕ್ಸ್​ ಸಖತ್​ ಇಷ್ಟ ಆಗಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ಕಾಂತಾರ ಸಿನಿಮಾವನ್ನು ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ. ರಿಷಬ್​ ಶೆಟ್ಟಿ ಅವರಿಂದಾಗಿ ಈ ಸಿನಿಮಾ ಅಸಾಧಾರಣ ಎನಿಸಿಕೊಂಡಿದೆ. ನಿರೂಪಣೆ, ನಟನೆ ಮತ್ತು ನಿರ್ದೇಶನ ಅತ್ಯುತ್ತಮವಾಗಿದೆ. ಕ್ಲೈಮ್ಯಾಕ್ಸ್​ನಲ್ಲಿ ಕಂಡ ಬದಲಾವನೆಯಿಂದ ನನಗೆ ರೋಮಾಂಚನ ಆಯಿತು. ಇಡೀ ತಂಡಕ್ಕೆ ನನ್ನ ಗೌರವ ಮತ್ತು ಅಭಿನಂದನೆಗಳು’ ಎಂದು ಹೃತಿಕ್​ ರೋಷನ್​ ಪೋಸ್ಟ್​ ಮಾಡಿದ್ದಾರೆ.

ಕೋಟಿ ಕೋಟಿ ಬಾಚಿಕೊಳ್ಳುತ್ತಿರುವ ಕಾಂತಾರ ಸಿನಿಮಾ ಮತ್ತೊಂದು ವಿವಾದದ ಸುಳಿಯಲ್ಲಿ…!

ಕನ್ನಡ ಸಿನಿಮಾಗಳು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ‘ಕಾಂತಾರ’ ಚಿತ್ರದಿಂದ ಚಂದನವನದ ಚಾರ್ಮ್​ ಹೆಚ್ಚಿದೆ. ರಜನಿಕಾಂತ್​, ವಿವೇಕ್​ ಅಗ್ನಿಹೋತ್ರಿ, ಕಂಗನಾ ರಣಾವತ್​, ಅನುಷ್ಕಾ ಶೆಟ್ಟಿ, ಪ್ರಭಾಸ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಸಿನಿಮಾವನ್ನು ಕೊಂಡಾಡಿದ್ದಾರೆ. ಅವರ ಸಾಲಿಗೆ ಹೃತಿಕ್ ರೋಷನ್​ ಕೂಡ ಸೇರ್ಪಡೆ ಆಗಿದ್ದಾರೆ.

ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ ಗಂಡಸಿ ನಾಗರಾಜ್ ಇನ್ನಿಲ್ಲ – Vishwanews24

Leave a Reply