ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಆರೋಪ : ಸೋನು ಶ್ರೀನಿವಾಸ್ ಗೌಡ ಬಂಧನ – Vishwanews24
ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಆರೋಪ: : ಸೋನು ಶ್ರೀನಿವಾಸ್ ಗೌಡ ಬಂಧನ
ಬಿಗ್ ಬಾಸ್ ಮಾಜಿ ಸ್ಪರ್ಧಿ, ಟಿಕ್ ಟಾಕ್ ಸ್ಟಾರ್ ಎಂದೇ ಖ್ಯಾತರಾಗಿದ್ದ ಸೋನು ಶ್ರೀನಿವಾಸ್ ಗೌಡ ಬಂಧನವಾಗಿದೆ. ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಸೋನು ಅನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಜಂಟಿ ಕಾರ್ಯಚರಣೆ ವೇಳೆ ಬಂಧನವಾಗಿದೆ.
ಈ ಹಿಂದೆಯಷ್ಟೇ ಸೋನು ಶ್ರೀನಿವಾಸ್ ಗೌಡ ಸಾಮಾಜಿಕ ಜಾಲತಾಣದಲ್ಲಿ ಮಗು ದತ್ತು ಪಡೆದಿರುವ ಬಗ್ಗೆ ಟ್ರೋಲ್ ಆಗಿದ್ದರು. ಸ್ವತಃ ಸೋನು ಗೌಡ ಅವರೇ ಆ ಮಗುವನ್ನು ಇಟ್ಟುಕೊಂಡು ವಿಡಿಯೋ ಕೂಡ ಮಾಡಿದ್ದರು. ಈ ಮಗುವಿನ ಪರಿಚಯವನ್ನು ಸೋನು ಸೋಷಿಯಲ್ ಮೀಡಿಯಾದಲ್ಲಿ ಮಾಡಿದ್ದರು.
ದತ್ತು ಪಡೆಯುವ ಯಾವುದೇ ನಿಯಮವನ್ನು ದತ್ತು ಪಾಲಿಸದೇ ಇರುವ ಕಾರಣಕ್ಕಾಗಿ ಮಕ್ಕಳ ಹಕ್ಕು ಕಸಿದಿರುವ ಆರೋಪ ಸೋನು ಮೇಲಿದೆ. ಉತ್ತರ ಕರ್ನಾಟಕದ 8 ವರ್ಷದ ಮಗು ಅದಾಗಿದ್ದು, ಸಿಂಪತಿ ಗಿಟ್ಟಿಸಿಕೊಂಡು ಸೆಲೆಬ್ರಿಟಿ ಆಗಲು ಸೋನು ಮುಂದಾಗಿದ್ದರು ಎನ್ನುವ ಆರೋಪ ಕೂಡ ಇದೆ.
ಮಕ್ಕಳ ರಕ್ಷಣಾಧಿಕಾರಿಗಳಿಂದ ದೂರು ಬಂದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸ್ರಿಂದ ಸೋನು ಶ್ರೀನಿವಾಸ್ ಗೌಡ ಬಂಧನವಾಗಿದೆ.
