ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

Featured, ಉಡುಪಿ

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ

ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ

ಕಾಪು: ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ನ.27ರಂದು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಉಚಿತ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಕೆಪಿಸಿಸಿ ಪ್ರಚಾರ ಸಮಿತಿ ಉಡುಪಿ ಜಿಲ್ಲೆ ವತಿಯಿಂದ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.

ನವೆಂಬರ್ 27ರ ಶುಕ್ರವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 2.30ರವರೆಗೆ ಉದ್ಯೋಗ ಮೇಳ ನಡೆಯಲಿದ್ದು, ದಂಡತೀರ್ಥ ಪಿ.ಯು. ಕಾಲೇಜು ಹಾಗೂ ದಂಡತೀರ್ಥ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಪದವಿ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಬಿಪಿಒ, ಆಟೋಮೊಬೈಲ್, ಮಾರ್ಕೆಟಿಂಗ್, ಹಾಸ್ಪಿಟಾಲಿಟಿ ಸೇರಿದಂತೆ ವಿವಿಧ ಕ್ಷೇತ್ರಗಳ 50ಕ್ಕೂ ಹೆಚ್ಚು ಉದ್ಯೋಗದಾತ ಸಂಸ್ಥೆಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳಿಗೆ ನೇರ ಉದ್ಯೋಗ ಸಂದರ್ಶನದ ಅವಕಾಶ ದೊರೆಯಲಿದೆ.

ಉದ್ಯೋಗ ಅರಸುತ್ತಿರುವ ಯುವಕ-ಯುವತಿಯರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಜಕರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಸಂಧರ್ಭದಲ್ಲಿ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

Leave a Reply