ಕಾಪುವಿನಲ್ಲಿ ಶಾಸಕ ಲಾಲಾಜಿ ಮೆಂಡನ್ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ.vishwanews24
ಕಾಪುವಿನಲ್ಲಿ ಶಾಸಕ ಲಾಲಾಜಿ ಮೆಂಡನ್ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ.
ಕಾಪು:ಉಡುಪಿ ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಕೋವಿಡ್ ಲಸಿಕಾ ಅಭಿಯಾನಕ್ಕೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಚಾಲನೆ ನೀಡಿ ಶಾಸಕರ ಶಿಫಾರಸ್ಸಿನಂತೆ ರಾಜ್ಯ ಸರಕಾರ ಕಾಪು ವಿಧಾನ ಸಭಾ ಕ್ಷೇತ್ರಕ್ಕೆ ನಾಲ್ಕು ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಕೊಡಮಾಡಿದ್ದು, ಅದನ್ನು ಸಾಂಕೇತಿಕವಾಗಿ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೋಮವಾರ ಹಸ್ತಾಂತರಿಸಲಾಯಿತು.
ದೇಶದ ಜನಸಂಖ್ಯೆ 138 ಕೋಟಿಯಿದ್ದು, ಜನರನ್ನು ಲಸಿಕೆ ವೇಗವಾಗಿ ತಲುಪುವುದು ಅಸಾಧ್ಯವಾಗಿದ್ದರೂ,ದೇಶದಲ್ಲಿ ಈವರೆಗೆ ಸುಮಾರು 35 ಕೋಟಿ ಜನರಿಗೆ ಲಸಿಕೆ ವಿತರಿಸಿರುವುದು ಹೆಮ್ಮೆ ಪಡುವಂತಹ ಸಾಧನೆಯಾಗಿದೆ ಎಂದು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಂಟಿಯಾಗಿ ಲಸಿಕೆ ವಿತರಣೆಗೆ ಮುಂದಾಗಿದ್ದು, ಆದ್ಯತೆಯ ಮೇರೆಗೆ ಲಸಿಕೆ ವಿತರಣೆಗೆ ಮುತುವರ್ಜಿ ವಹಿಸಲಾಗಿದೆ. ಜನರು ಆತಂಕಿತರಾಗದೇ, ಕೋವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಕೋವಿಡ್ 19 ರೋಗವನ್ನು ದೂರಗೊಳಿಸಲು ಕೈ ಜೋಡಿಸುವಂತೆ ಮನವಿ ಮಾಡಿದರು.
ಸಮಾರಂಭದಲ್ಲಿ ಕಾಪು ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುಬ್ರಾಯ ಕಾಮತ್,ಡಾ ರೇಷ್ಮಾ,ಕಾಪು ಹಳೇ ಮಾರಿಗುಡಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಸುರೇಶ್ ಪ್ರಭು ಮೊದಲಾದವರು ಉಪಸ್ಥಿತರಿದ್ದರು.
ಆರೋಗ್ಯ ಶಿಕ್ಷಣ ಅಧಿಕಾರಿ ಚಂದ್ರ ಕಲಾ ಕಾರ್ಯಕ್ರಮ ರೂಪಿಸಿ ವಂದಿಸಿದರು.



