ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

Featured, ಉಡುಪಿ

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.28 ರಂದು ಸಂಭವಿಸಿದೆ. ಮಗನ ಸಾವಿನ ಬಳಿಕ ನೀಲಾಧರ ಬಂಗೇರ ಅವರು ರಾತ್ರಿ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡದೆ ಖಿನ್ನತೆಗೊಳಗಾಗಿ ಉಡುಪಿ ಸರಕಾರಿ ಆಸ್ಪತ್ರೆ ಹಾಗೂ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

ಶನಿವಾರ ಮಧ್ಯಾಹ್ನ 3.30 ಗಂಟೆಗೆ ನನಗೆ ನಿನ್ನೆ ರಾತ್ರಿ ಇಡೀ ನಿದ್ದೆ ಬರಲಿಲ್ಲ, ನಾನು ಸಾಯುತ್ತೇನೆ ಎಂದು ಪತ್ನಿಯ ಬಳಿ ಹೇಳಿ ತನ್ನ ಕೈಯಲ್ಲಿದ್ದ ಇಲಿ ಪಾಷಾಣದ ಟ್ಯೂಬ್ ಗಳನ್ನು ತೋರಿಸಿ ಇದನ್ನು ಸೇವಿಸಿರುತ್ತೇನೆ ಎಂದು ತಿಳಿಸಿದ್ದರು.

ಇದನ್ನೂ ಓದಿ:

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

 

ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಅವರನ್ನು ಒಳರೋಗಿಯಾಗಿ ದಾಖಲು ಮಾಡಿಕೊಂಡಿದ್ದರು. ಇದರೆ ಚಿಕಿತ್ಸೆ ಫಲಕಾರಿಯಾಗದೆ ಮಾ. 29 ರಂದು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ಪತ್ನಿ ರವಿಕಲಾ ನೀಡಿರುವ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply