ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ – vishwanews24

Featured, ಉಡುಪಿ

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ

ಕಾಪು : ಗ್ರಾಮೀಣ ಕಾಂಗ್ರೆಸ್ ಸಮಿತಿಯ ಫಲಾನುಭವಿ ಸಮಾವೇಶವನ್ನು ಸರ್ಕಾರಿ ಕಾರ್ಯಕ್ರಮದ ರೀತಿಯಲ್ಲಿ ಬಿಂಬಿಸಿ ಜನರನ್ನು ಆಹ್ವಾನಿಸುತ್ತಿರುವುದಕ್ಕೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ಜನರನ್ನು ಗೃಹಲಕ್ಷ್ಮಿ ಯೋಜನೆಯ ಕೆವೈಸಿ ಮಾಡುವ ನೆಪದಲ್ಲಿ ಸಮಾವೇಶಕ್ಕೆ ಆಹ್ವಾನಿಸಲಾಗುತ್ತಿದೆ. ಅಲ್ಲದೆ, ಸಮಾವೇಶಕ್ಕೆ ಹಾಜರಾಗದಿದ್ದರೆ ಮುಂದಿನ ಕಂತಿನ ಹಣ ಬರುವುದಿಲ್ಲ ಎಂಬ ರೀತಿಯಲ್ಲಿ ಜನರಲ್ಲಿ ಭೀತಿ ಮತ್ತು ಗೊಂದಲ ಮೂಡಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಉಡುಪಿಯಲ್ಲಿ 28ರಿಂದ 30ರವರೆಗೆ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ – vishwanews24

Leave a Reply