ಕಾಪು : ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಧರಣಿ ಸತ್ಯಾಗ್ರಹದೊಂದಿಗೆ ಪ್ರತಿಭಟನೆ – vishwanews24

Featured, ಉಡುಪಿ

ಕಾಪು : ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಧರಣಿ ಸತ್ಯಾಗ್ರಹದೊಂದಿಗೆ ಪ್ರತಿಭಟನೆ

ಕಾಪು : ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಕಾಪು ಪುರಸಭೆ ಸಹಿತ ವಿಧಾನಸಭಾ ಕ್ಷೇತ್ರದ ಸ್ಥಳೀಯಾಡಳಿತ ಸಂಸ್ಥೆಗಳ ಮುಂಭಾಗದಲ್ಲಿ ಸೋಮವಾರ ಬಿಜೆಪಿ ಧರಣಿ ಸತ್ಯಾಗ್ರಹದೊಂದಿಗೆ ಪ್ರತಿಭಟನೆ ನಡೆಸಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಅಭಿವೃದ್ಧಿ ಕುರಿತಾದ ಬೇಡಿಕಡೆಗಳಿಗೆ ಸ್ಪಂಧನೆ ನೀಡದ ರಾಜ್ಯ ಸರಕಾರ ಈಗ ಏಕಾಏಕಿಯಾಗಿ ಪಿಂಚಣಿ ಸೌಲಭ್ಯಗಳನ್ನು ತಡೆ ಹಿಡಿಯುವ ಪ್ರಯತ್ನಕ್ಕೆ ಕೈ ಹಾಕಿದೆ. ಇದರ ಜತೆಗೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಕಾಪು ಕ್ಷೇತ್ರದ 26 ಗ್ರಾಮ ಪಂಚಾಯತ್ ಮತ್ತು ಪುರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದ್ದು ಇದು ನಮ್ಮ ಜವಬ್ದಾರಿಯೂ ಆಗಿದೆ ಎಂದರು.

ಉಡುಪಿ : ಶಾಲೆಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಕರೆ ; ಅಹಮದಾಬಾದ್‌ನಲ್ಲಿಆರೋಪಿ ಮಹಿಳೆ ಪೊಲೀಸ್ ವಶಕ್ಕೆ – vishwanews24

ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ರಾಜ್ಯ ಸರಕಾರದ ವಿರುದ್ಧ ತೀವ್ರ ಜನಾಕ್ರೋಶ ವ್ಯಕ್ತವಾಗುತ್ತಿದೆ. ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಸಹಿತ ಪಿಂಚಣಿ ಸೌಲಭ್ಯಗಳನ್ನು ತಡೆ ಹಿಡಿಯಲು ಮುಂದಾದ ರಾಜ್ಯ ಸರಕಾರ ನಡೆ ಖಂಡನೀಯವಾಗಿದೆ ಎಂದರು.

ಈ ಸಂದರ್ಭ ಮಾಜಿ ಶಾಸಕ ಲಾಲಾಜಿ ಮೆಂಡನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply