ಕಾಪು : ಜಿಲ್ಲೆಯಲ್ಲಿ ಇಂತಹ ಗಂಭೀರ ಘಟನೆ ನಡೆದರೂ ಪೊಲೀಸ್ ವರಿಷ್ಠಾಧಿಕಾರಿಯಿಂದ  ಬೇಜವಾಬ್ದಾರಿಯ ಹೇಳಿಕೆ : ಶಿಲ್ಪಾ ಜಿ. ಸುವರ್ಣ – Vishwanews24

Featured, ಉಡುಪಿ

ಕಾಪು : ಜಿಲ್ಲೆಯಲ್ಲಿ ಇಂತಹ ಗಂಭೀರ ಘಟನೆ ನಡೆದರೂ ಪೊಲೀಸ್ ವರಿಷ್ಠಾಧಿಕಾರಿಯಿಂದ  ಬೇಜವಾಬ್ದಾರಿಯ ಹೇಳಿಕೆ : ಶಿಲ್ಪಾ ಜಿ. ಸುವರ್ಣ

ಕಾಪು : ಉಡುಪಿಯ ನೇತ್ರ ಜ್ಯೋತಿ ಪ್ಯಾರ ಮೇಡಿಕಲ್ ಕಾಲೇಜ್ ನಲ್ಲಿ ವಿಕೃತ ಮನಸ್ಸಿನ ಮೂವರು ವಿದ್ಯಾರ್ಥಿನಿಯರಿಂದ ನಡೆದ ವಿಡಿಯೋ ಚಿತ್ರೀಕರಣ ಘಟನೆ ಖಂಡನೀಯವಾಗಿದೆ. ಒಬ್ಬ ಮಹಿಳೆಯಾಗಿ,ಹೆಣ್ಣು ಮಗಳ ತಾಯಿಯಾಗಿ ತೀವ್ರವಾಗಿ ಖಂಡಿಸುತ್ತೇನೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ತಿಳಿಸಿದ್ದಾರೆ.

ವಿದ್ಯಾರ್ಥಿನಿಯರು ನಡೆಸಿರುವ ಘಟನೆಯ ಬಗ್ಗೆ ತಿಳಿದಾಗ ನಮ್ಮ ಉಡುಪಿಯಲ್ಲಿ ಕೂಡ ಇಂತಹ ಮಾನಸಿಕತೆಯ ವಿದ್ಯಾರ್ಥಿನಿಯರು ಇದ್ದಾರೆಯೇ ಎಂಬ ಪ್ರಶ್ನೆ ಮನಸ್ಸಿನಲ್ಲಿ ಬಂದಿದೆ. ಕಾಲೇಜು ಆಡಳಿತ ಮಂಡಳಿ ತಪ್ಪಿತಸ್ಥ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿ ಅವರಿಂದ ವಶ ಪಡಿಸಿಕೊಂಡ ಮೊಬೈಲನ್ನು ಪೊಲೀಸ್ ಇಲಾಖೆಗೆ ನೀಡಿದ್ದೇವೆ ಎಂದು ಹೇಳುತ್ತಾರೆ. ಆದರೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯವರು ನಮಗೆ ಘಟನೆಯ ಬಗ್ಗೆ ಗೊತ್ತಿಲ್ಲ ಎಂದು ಹೇಳುತ್ತಾರೆ. ಜಿಲ್ಲೆಯಲ್ಲಿ ಇಂತಹ ಗಂಭೀರ ಘಟನೆ ನಡೆದರೂ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಿಂದ ಇಂತಹ ಬೇಜವಾಬ್ದಾರಿಯ ಹೇಳಿಕೆಯ ಹಿಂದಿನ ಗುಟ್ಟೇನು ? ಎನ್ನುವುದು ಬಹಿರಂಗಗೊಳ್ಳಬೇಕಿದೆ. ಸಂಬಂಧ ಪಟ್ಟ ಪೊಲೀಸ್ ಇಲಾಖೆಯವರು ಇನ್ನಾದರೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ವಿದ್ಯಾರ್ಥಿನಿಯರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆಯನ್ನು ಖಂಡಿಸಿ ನಾಳೆ ಕಾಪುವಿನಲ್ಲಿ ಮಹಿಳಾ ಮೋರ್ಚಾ ಬೃಹತ್ ಪ್ರತಿಭಟನೆ: ವೀಣಾ ಶೆಟ್ಟಿ  – Vishwanews24

ಕರ್ನಾಟಕ ರಾಜ್ಯವೇ ತಲೆತಗ್ಗಿಸುವಂತಹ ಇಂತಹ ಹೇಯ ಕೃತ್ಯ ನಡೆಸಿರುವ ಮೂವರು ವಿದ್ಯಾರ್ಥಿನಿಯರ ಮೇಲೆ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ.

ಈ ಘಟನೆಯನ್ನು ಖಂಡಿಸಿ, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಜುಲೈ 27 ರಂದು ಬೆಳಗ್ಗೆ 11.00 ಗಂಟೆಗೆ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ ನೇತೃತ್ವದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಜ್ಯದಾದ್ಯಂತ ಪಕ್ಷದ 39 ಸಂಘಟನಾತ್ಮಕ ಜಿಲ್ಲೆಗಳಲ್ಲಿಯೂ ಏಕಕಾಲದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply