ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಸುವರ್ಣ ಕಟಪಾಡಿ ಆಯ್ಕೆ….
ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಕಾಶ್ ಸುವರ್ಣ ಕಟಪಾಡಿ ಆಯ್ಕೆಯಾಗಿದ್ದಾರೆ.
ಕಾಪು ಪ್ರೆಸ್ ಕ್ಲಬ್‍ನಲ್ಲಿ ಮಂಗಳವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ 2018-2019 ನೇ ಸಾಲಿನ ನೂತನ ಪಧಾದಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಕರುಣಾಕರ್ ನಾಯಕ್ ಪಡುಬಿದ್ರಿ, ಕೋಶಾಧಿಕಾರಿಯಾಗಿ ಸಂತೋಷ್ ನಾಯ್ಕ್ ಕಾಪು,ಕ್ರೀಡಾ ಮತ್ತು ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಹೇಮನಾಥ್ ಪಡುಬಿದ್ರೆ, ಪ್ರೆಸ್ ಕ್ಲಬ್ ನಿರ್ವಾಹಕರಾಗಿ ಪ್ರಮೋದ್ ಸುವರ್ಣ ಕಟಪಾಡಿ, ಗೌರವ ಸಲಹೆಗಾರರಾಗಿ ಪುಂಡಲೀಕಕ ಮರಾಠೆ ಶಿರ್ವ, ಬಾಲಕೃಷ್ಣ ಪೂಜಾರಿ ಉಚ್ಚಿಲ, ಕಾನೂನು ಸಲಹೆಗಾರರಾಗಿ ಅಶೀದುಲ್ಲಾ ಕಟಪಾಡಿ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸತೋಷ್ ಸರಳಬೆಟ್ಟು ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು.
ನಿರ್ಗಮನ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುರೇಶ್ ಎರ್ಮಾಳ್ ವರದಿ ವಾಚಿಸಿದರು. ಕೋಶಾಧಿಕಾರಿ ಪ್ರಮೋದ್ ಸುವರ್ಣ ಲೆಕ್ಕ ಪತ್ರ ಮಂಡಿಸಿದರು.
