ಕಾಪು : ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ : ಮೂವರು ಲಾಂಗ್ ಹಿಡಿದು ಬೈಕ್‌ನಲ್ಲಿ ತೆರಳುತ್ತಿರುವ ಸಿಸಿಟಿವಿ ದೃಶ್ಯ ಲಭ್ಯ – Vishwanews24
ಕಾಪು : ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ : ಮೂವರು ಲಾಂಗ್ ಹಿಡಿದು ಬೈಕ್‌ನಲ್ಲಿ ತೆರಳುತ್ತಿರುವ ಸಿಸಿಟಿವಿ ದೃಶ್ಯ ಲಭ್ಯ
ಕಾಪು: ಭಾನುವಾರ ಸಂಜೆ ಪಾಂಗಾಳದ ಶರತ್ ಶೆಟ್ಟಿ ಕೊಲೆ ಪ್ರಕರಣದ ಸಿಸಿಟಿ ಫೂಟೇಜ್ ಲಭ್ಯವಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮೂವರು ವ್ಯಕ್ತಿಗಳು ಕೈಯಲ್ಲಿ ಲಾಂಗ್ ಹಿಡಿದು ಬೈಕ್‌ನಲ್ಲಿ ತೆರಳುತ್ತಿರುವ ದೃಶ್ಯ ಸೆರೆಯಾಗಿದ್ದು ಇದನ್ನಾಧರಿಸಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿ ಆಗಿದ್ದ ಶರತ್ ಶೆಟ್ಟಿಯವರನ್ನು ಪಾಂಗಾಳದ ಬಬ್ಬುಸ್ವಾಮಿ ದೈವಸ್ಥಾನದ ನೇಮೋತ್ಸವದಲ್ಲಿದ್ದಾಗ ಫೋನ್ ಕರೆ ಮಾಡಿ
ಕರೆಸಿಕೊಳ್ಳಲಾಗಿತ್ತು. ಮೊಬೈಲ್ ಕರೆ ಬಂದ ಹಿನ್ನಲೆಯಲ್ಲಿ ಅವರು ರಾಷ್ಟ್ರೀಯ ಹೆದ್ದಾರಿ ಬಳಿ ಬಂದಿದ್ದರು. ಬಳಿಕ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ರಕ್ತ ಮಡುವಿನಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶರತ್ ಅವರ ಎದೆಯ ಭಾಗಕ್ಕೆ ಬಲವಾಗಿ ಚೂರಿ ಹಾಕಿದ್ದ ಹಿನ್ನಲೆಯಲ್ಲಿ ಶರತ್ ಶೆಟ್ಟಿ ಸಾವನ್ನಪ್ಪಿದ್ದರು.
ಇದೀಗ ಕೊಲೆಯ ಬಳಿಕ ಸ್ಥಳದ ಅಕ್ಕಪಕ್ಕದಲ್ಲಿರುವ ಸಿಸಿ ಟಿವಿ ಫೂಟೇಜ್ ನ್ನು ಪೊಲೀಸರು ಸಂಗ್ರಹಿಸಿದ್ದಾರೆ. ತನಿಖೆಗಾಗಿ ಕಾರ್ಕಳ ಡಿವೈಎಸ್ಪಿ ನೇತೃತ್ವದಲ್ಲಿ ಮೂರು ತಂಡ ರಚಿಸಲಾಗಿದೆ.
ಶರತ್ ಶೆಟ್ಟಿ, ಭೂ ವ್ಯವಹಾರ ನಡೆಸುತ್ತಿದ್ದ ಕಾರಣ, ಕಮಿಷನ್ ಹಣದ ವಿಚಾರದಲ್ಲಿ ಕೊಲೆಯಾಗಿರಬಹುದೇ ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.
ಮೂಡುಬಿದಿರೆ: ಟಿಪ್ಪರ್ ಚಲಾಯಿಸಿ ವ್ಯಕ್ತಿ ಕೊಲೆ ಮಾಡಿದ ಆರೋಪಿಯ ಬಂಧನ – Vishwanews24
