ಕಾಪು: ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ : ಪೊಲೀಸರಿಂದ ತನಿಖೆ ಚುರುಕು – Vishwanews24
ಕಾಪು: ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ : ಪೊಲೀಸರಿಂದ ತನಿಖೆ ಚುರುಕು – ಒಂದೆರಡು ದಿನದಲ್ಲಿ ಅಪರಾಧಿಗಳ ಪತ್ತೆ
ಕಾಪು : ಪಾಂಗಾಳದ ಬಳಿ ಭಾನುವಾರ ನಡೆದ ಶರತ್ ಶೆಟ್ಟಿ(38) ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಈ ಕುರಿತು ದೊರೆತ ಕೆಲವೊಂದು ಮಹತ್ವ ಸುಳುವಿನ ಆಧಾರದಲ್ಲಿ ಅನುಮಾನಸ್ಪದರನ್ನು ವಿಚಾರಣೆ ನಡೆಸಿದ್ದಾರೆ.
ಈಗಾಗಲೇ ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ಮಾರ್ಗದರ್ಶನದಲ್ಲಿ ಕಾರ್ಕಳ ಡಿವೈಎಸ್ಪಿ ಅರವಿಂದ್ ಕುಲಗುಜ್ಜಿ ನೇತೃತ್ವದಲ್ಲಿ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಇದರಲ್ಲಿ ಒಂದು ತಂಡ ಆರೋಪಿಗಳ ಸುಳುವಿನ ಆಧಾರದಲ್ಲಿ ಮಂಗಳೂರಿಗೆ ತೆರಳಿದೆ ಎನ್ನಲಾಗಿದೆ
ಒಂದು ತಂಡ ಮೃತ ಶರತ್ ಶೆಟ್ಟಿ ಮೊಬೈಲ್ ಹಾಗೂ ಸಿಸಿಟಿವಿ ವಿಡಿಯೋ ಆಧಾರದಲ್ಲಿ ಉಡುಪಿಯಲ್ಲಿ ಮಾಹಿತಿ ಕಲೆಹಾಕುತ್ತಿದೆ. ಶರತ್ ಶೆಟ್ಟಿ ಭೂ ವ್ಯವಹಾರ ನಡೆಸಿಕೊಂಡಿರುವುದರಿಂದ ಪೊಲೀಸರು ಆ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಒಂದೆರಡು ದಿನದಲ್ಲಿ ಅಪರಾಧಿಗಳನ್ನು ಪತ್ತೆಹಚ್ಚಲಾಗುವುದು ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ
