ಕಾಪು: ಬೆಳ್ವೆ ಗ್ರಾಮದಲ್ಲಿ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಸಂಸದೆ ಶೋಭಾ ಕರಂದ್ಲಾಜೆ ಸಮ್ಮುಖದಲ್ಲಿ ಶಂಕುಸ್ಥಾಪನೆ -Vishwanews24

Featured, ಉಡುಪಿ

ಕಾಪು: ಬೆಳ್ವೆ ಗ್ರಾಮದಲ್ಲಿನ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಸಂಸದೆ ಶೋಭಾ ಕರಂದ್ಲಾಜೆ ಸಮ್ಮುಖದಲ್ಲಿ ಶಂಕುಸ್ಥಾಪನೆ -Vishwanews24

ಕಾಪು: ಉಡುಪಿ ಜಿಲ್ಲೆ ಕಾಪು ವಿಧಾನಸಭಾ ಕ್ಷೇತ್ರದ ಬೆಳ್ವೆ ಗ್ರಾಮದಲ್ಲಿನ ಕುಂತಲನಗರದ ಭದ್ರಮಾ ( ವಯಾ ಮಾಧವ ನಗರ-ಬಂಟಕಲ್ಲು) ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಇಂದು ಸಂಸದೆ ಶೋಭಾ ಕರಂದ್ಲಾಜೆ, ಸ್ಥಳೀಯ ಶಾಸಕರಾದ ಲಾಲಾಜಿ ಆರ್. ಮೆಂಡನ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 6 ಕೋಟಿ 45 ಲಕ್ಷ ರೂ. ವೆಚ್ಚದಲ್ಲಿ ಈ ಸೇತುವೆ ಮತ್ತು ಅಪ್ರೋಚ್ ರೋಡುಗಳು ನಿರ್ಮಾಣಗೊಳ್ಳಲಿವೆ.

ಇದಲ್ಲದೆ, ಪ್ರದೇಶದಲ್ಲಿ ಹಾದು ಹೋಗುವ ರಸ್ತೆಯ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ 4.5 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಸೇತುವೆಯ ಕಾಮಗಾರಿ ಸಂಪೂರ್ಣಗೊಂಡ ತಕ್ಷಣವೇ ರಸ್ತೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸಿ ಅನುದಾನ ಬಿಡುಗಡೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ, ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ವಿಶೇಷ ಧನ್ಯವಾದ ಅರ್ಪಿಸಿದರು.

ಈ ಸಂದರ್ಭ ಜಿಪಂ ಅಧ್ಯಕ್ಷ ದಿನಕರ್ ಬಾಬು, ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.