ಕಾಪು : ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಂಯೋಜಕರಾಗಿ ವಿಶ್ವಾಸ್ ಅಮೀನ್ ನೇಮಕ – Vishwanews24
ಕಾಪು : ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಂಯೋಜಕರಾಗಿ ವಿಶ್ವಾಸ್ ಅಮೀನ್ ನೇಮಕ
ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯ ಕಾಪು ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಂಯೋಜಕರಾಗಿ ವಿಶ್ವಾಸ್ ಅಮೀನ್ ಹಾಗೂ ಜಂಟಿ ಸಂಯೋಜಕರಾಗಿ ಕಾಪು ದಕ್ಷಿಣ ಬ್ಲಾಕ್ ಗೆ ಜಿತೇಂದ್ರ ಫುಟಾರ್ಡೊ ಹಾಗೂ ಕಾಪು ಉತ್ತರ ಬ್ಲಾಕ್- ಚರಣ್ ವಿಠಲ್ ಕುದಿ ಅವರನ್ನು ನೇಮಕಗೊಳಿಸಲಾಗಿದೆ.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರರಾದ ಅಲೆವೂರು ಹರೀಶ್ ಕಿಣಿಯವರ ಶಿಫಾರಸ್ಸಿನ ಮೇರೆಗೆ ಹಾಗೂ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಎಂ.ಬಿ. ಪಾಟೀಲ್ ರವರ ಅನುಮೋದನೆಯೊಂದಿಗೆ ಈ ನೇಮಕಾತಿಯನ್ನು ಮಾಡಲಾಗಿದೆ.
ಕಾರ್ಕಳ : ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು – Vishwanews24
ನೇಮಕಗೊಂಡ ಸಂಯೋಜಕರು ಮತ್ತು ಜಂಟಿ ಸಂಯೋಜಕರು ಈ ಕೂಡಲೇ ಕಾರ್ಯೋನ್ಮುಖರಾಗಿ ತಮ್ಮ ಜವಾಬ್ದಾರಿ ವಹಿಸಿಕೊಂಡು ಪಕ್ಷ ಸಂಘಟನೆ, ಪಕ್ಷದ ತತ್ವ ಸಿದ್ಧಾಂತ, ಕಾಂಗ್ರೆಸ್ ಸರಕಾರದ ಸಾಧನೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಗಳನ್ನು ಜನರಿಗೆ ಮನದಟ್ಟು ಮಾಡುವ ರೀತಿಯಲ್ಲಿ ಪ್ರಚಾರ ಮಾಡಲು ನಿರ್ದೇಶಿಸಲಾಗಿದೆ ಎಂದು ಪ್ರಚಾರ ಸಮಿತಿಯ ರಾಜ್ಯ ಸಮಿತಿಯ ಸಹ ಅಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.
ಕಾರ್ಕಳ : ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು – Vishwanews24
