ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

Featured, ಉಡುಪಿ

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ – ಬಾಲಕಿ ಸಾವು

ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್‌ ಸ್ಟೇಶನ್‌ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಕೊನೆಯುಸಿರೆಳೆದಿದ್ದಾರೆ.

ದುಬಾಯಿಯಲ್ಲಿ ವಾಸವಿದ್ದ ಈ ಕುಟುಂಬವು ಮುಂದೆ ಊರಿನಲ್ಲಿಯೇ ನೆಲೆಸುವ ಸಿದ್ಧತೆಯಲ್ಲಿತ್ತು. ಸಾತ್ವಿಗಾಗಿ ಆಕೆಯ ಹೆತ್ತವರು ಉಡುಪಿಯ ಖಾಸಗಿ ಶಾಲೆಯಲ್ಲಿ ಪ್ರವೇಶಾತಿಯನ್ನೂ ಮುಗಿಸಿದ್ದರು. ಮರುದಿನ ಆಕೆಯ ತಂದೆ ನಿತ್ಯಾನಂದ ಶೆಟ್ಟಿ ಅವರು ಮಾತ್ರ ದುಬಾಯಿಗೆ ತೆರಳುವರಿದ್ದು, ಕಾಪು ಪೇಟೆಗೆ ಏನನ್ನೋ ತರಲು ಹೋಗಿ ವಾಪಾಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪಘಾತದ ತಾಣಕ್ಕೂ ಅವರ ಪೂವಣಿಗುತ್ತು ಮನೆಗೂ ಕೇವಲ ಅರ್ಧ ಕಿ.ಮೀ. ದೂರವಷ್ಟೇ ಬಾಕಿ ಇತ್ತು. ಆದ್ರೆ, ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಖಾಸಗಿ ಬಸ್ಸು ಸ್ಕೂಟಿಗೆ ಡಿಕ್ಕಿ ಹೊಡೆದು ತಂದೆಯೊಂದಿಗೆ ಬಂದಿದ್ದ ಬಾಲಕಿ ಸಾತ್ವಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Leave a Reply