ಕಾರು ಪಲ್ಟಿ : ಇಬ್ಬರು ಸ್ಥಳದಲ್ಲೇ ಸಾವು ; ಮತ್ತಿಬ್ಬರು ಗಂಭೀರ – vishwanews24
ಕಾರು ಪಲ್ಟಿ : ಇಬ್ಬರು ಸ್ಥಳದಲ್ಲೇ ಸಾವು ; ಮತ್ತಿಬ್ಬರು ಗಂಭೀರ
ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ.
ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ (70) ಹಾಗೂ ಕಾಮಪ್ಪ ಅವರಾದಿ (65) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:
ಕಾರ್ಕಳ: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಾ.14 ರಂದು ಬಿಜೆಪಿಯಿಂದ ಪ್ರತಿಭಟನೆ – vishwanews24
ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ನಾಲ್ವರು ಕಾಗವಾಡದಿಂದ ಶ್ರೀಶೈಲಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.
