ಕಾರ್ಕಳದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ಆಯುಷ್ ಶೆಟ್ಟಿಗೆ “ಕೆಒಎ” ಪ್ರಶಸ್ತಿ ಪ್ರದಾನ – vishwanews24
ಕಾರ್ಕಳದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ಆಯುಷ್ ಶೆಟ್ಟಿಗೆ “ಕೆಒಎ” ಪ್ರಶಸ್ತಿ ಪ್ರದಾನ
ಕಾರ್ಕಳ: ಕರ್ನಾಟಕ ಒಲಿಂಪಿಕ್ ಸಂಸ್ಥೆ(ಕೆಒಎ) ವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಠಿತ ಕೆಒಎ ಪ್ರಶಸ್ತಿಗೆ ಕಾರ್ಕಳದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ಆಯುಷ್ ಶೆಟ್ಟಿ ಭಾಜನರಾಗಿದ್ದಾರೆ.
ರವಿವಾರ ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಈ ಗೌರವವನ್ನು ನೀಡಿ ಸಮ್ಮಾನಿಸಲಾಯಿತು. ರಾಜ್ಯಪಾಲ ಥಾವರ್ಚಂದ್ ಗೆಹೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಷ್ ಶೆಟ್ಟಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು. ಕ್ರೀಡಾ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಆಯುಷ್ ಶೆಟ್ಟಿ, ಕಿರಿಯ ವಯಸ್ಸಿನಲ್ಲೇ ಬ್ಯಾಡ್ಮಿಂಟನ್ ಲೋಕದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪ್ರತಿಭೆಯಾಗಿದ್ದು, ಇತ್ತೀಚೆಗೆ ಯುಎಸ್ ಓಪನ್ ಬಿಡಬ್ಲ್ಯೂಎಫ್ ಸೂಪರ್ 300 ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಜಯಗಳಿಸಿ ಚಾಂಪಿಯನ್ ಪಟ್ಟ ಪಡೆದಿದ್ದರು. ಆಯುಷ್ ಅವರು ಕಾರ್ಕಳ ಸಾಣೂರಿನ ಮಿತ್ತಲ ಮನೆಯ ರಾಮ್ ಪ್ರಕಾಶ್ ಶೆಟ್ಟಿ ಮತ್ತು ಶಾಲ್ಮಲಿ ದಂಪತಿ ಪುತ್ರ.
