ಕಾರ್ಕಳ : ಅಕ್ರಮ ಮತಾಂತರ ಆರೋಪ : ಕೇಂದ್ರಕ್ಕೆ ನುಗ್ಗಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು -Vishwanews24

Featured, ಉಡುಪಿ

ಕಾರ್ಕಳ : ಅಕ್ರಮ ಮತಾಂತರ ಆರೋಪ : ಕೇಂದ್ರಕ್ಕೆ ನುಗ್ಗಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು -Vishwanews24

ಕಾರ್ಕಳ : ಅಕ್ರಮವಾಗಿ ಮತಾಂತರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪ್ರಾರ್ಥನೆ ನಡೆಸುತ್ತಿದ್ದ ಜಾಗದ ಮೇಲೆ ದಾಳಿ ನಡೆಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.

ಕಾರ್ಕಳದ ಕುಕ್ಕಂದೂರು ಗ್ರಾಮದ ನಕ್ರೆ ಆನಂದಿ ಮೈದಾನ ಎಂಬಲ್ಲಿರುವ ಪ್ರಗತಿ ಸೆಂಟರ್ ಎಂಬ ಹೆಸರಿನ ಕೇಂದ್ರದಲ್ಲಿ ಅಕ್ರಮವಾಗಿ ಮತಾಂತರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಹಿಂದೂ ಕಾರ್ಯಕರ್ತರು ಏಕಾಏಕಿ ದಾಳಿ ನಡೆಸಿದ್ದಾರೆ. ಕಳೆದ 10 ವರ್ಷಗಳಿಂದ ಇಲ್ಲಿ ಹಿಂದೂ ಧರ್ಮದವರನ್ನು ಅಕ್ರಮವಾಗಿ ಮತಾಂತರ ನಡೆಸಲಾಗುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ.

ದಾಳಿ ಸಂದರ್ಭ ಸುಮಾರು 60ಕ್ಕೂ ಅಧಿಕ ಮಹಿಳೆಯರನ್ನು ಹತ್ತು ಮಕ್ಕಳನ್ನು ಸೇರಿಸಿ ಪ್ರಾರ್ಥನೆ ನಡೆಸಲಾಗುತ್ತಿತ್ತು, ಅಲ್ಲದೆ ಈ ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ಪಡೆಯದೇ ಅಕ್ರಮವಾಗಿ ಪ್ರಾರ್ಥನಲಯ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಬೆನಡಿಕ್ಟ್ ಎಂಬವರ ನೇತೃತ್ವದಲ್ಲಿ ನಡೆಯುತ್ತಿದ್ದ ಮತಾಂತರ ಕಾರ್ಯ ನಡೆಯುತಿತ್ತು ಎಂದು ಆರೋಪಿಸಲಾಗಿದೆ.

ದಾಳಿ ಸಂದರ್ಭ ಹಿಂದೂ ಕಾರ್ಯಕರ್ತರು ಮತ್ತು ಪ್ರಾರ್ಥನಾ ನಿರತರ ನಡುವೆ ಘರ್ಷಣೆ ನಡೆದಿದ್ದು, ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು.