ಕಾರ್ಕಳ: ಆನ್ಲೈನ್ ವಂಚನೆ ; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮಹಿಳೆಗೆ 24 ಲಕ್ಷ ರೂ. ವಂಚನೆ – vishwanews24

Featured, ಉಡುಪಿ

ಕಾರ್ಕಳ: ಆನ್ಲೈನ್ ವಂಚನೆ ; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮಹಿಳೆಗೆ 24 ಲಕ್ಷ ರೂ. ವಂಚನೆ

ಕಾರ್ಕಳ: ಕಾರ್ಕಳದ ಮಹಿಳೆಯೊಬ್ಬರು ಆನ್ಲೈನ್ ವಂಚನೆ ಜಾಲಕ್ಕೆ ಸಿಲುಕಿ 24 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

ಸಂತ್ರಸ್ಥ ಮಹಿಳೆ ಪ್ರೀಮ ಶರಿಲ್ ಡಿಸೋಜ (38) ಇವರು ಜನವರಿ 7 ರಂದು ಮನೆಯಲ್ಲಿರುವಾಗ ಮಧ್ಯಾಹ್ನ ಮೊಬೈಲ್ ನಂಬ್ರಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯು ತಾನು ದೆಹಲಿ ಟೆಲಿಕಾಂ ಇಲಾಖೆಯಿಂದ ಕಾಲ್ ಮಾಡುತ್ತಿದ್ದು ನಿಮ್ಮ ಆಧಾರ್ ನಂಬ್ರದಿಂದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ನಿಮ್ಮ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದೆ. ಈ ಬಗ್ಗೆ ಸೈಬರ್ ಅಧಿಕಾರಿಯು ನಿಮ್ಮೊಂದಿಗೆ ಮಾತನಾಡುತ್ತಾರೆ ಎಂದು ತಿಳಿಸಿದ್ದಾನೆ.

ಉಡುಪಿ: ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ , ಉಗ್ರರಿಗೆ  ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ  : ಸುನಿಲ್ ಕುಮಾರ್ ಆಕ್ರೋಶ – vishwanews24

ವೀಡಿಯೋ ಕಾಲ್ ಮಾಡಿ ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯು ತಾನು ಸಿಬಿಐ ಅಧಿಕಾರಿ ಎಂದು ತಿಳಿಸಿ ನೀವು ತನಿಖೆಗೆ ಸಹಕರಿಸಬೇಕು ಈ ವಿಚಾರವನ್ನು ಯಾರ ಬಳಿಯಲ್ಲಿಯೂ ಹೇಳುವಂತಿಲ್ಲ ಹೇಳಿದರೆ ನಿಮ್ಮ ಗಂಡ ಮತ್ತು ಮಗುವಿಗೆ ತೊಂದರೆಯಾಗುತ್ತದೆ ಎಂದು ಬೆದರಿಸಿದ್ದಾನೆ.

ನಂತರ ಸಂತ್ರಸ್ಥೆಯ ಬ್ಯಾಂಕ್ ಖಾತೆಗಳಲ್ಲಿರುವ ಹಣದ ವಿವರ ಪಡೆದುಕೊಂಡು ಹಣವನ್ನು ಅವರು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಬೇಕು ಇಲ್ಲವಾದರೆ ಅರೆಸ್ಟ್ ವಾರಂಟ್ ಕಳುಹಿಸುತ್ತೇವೆ ಎಂದು ಹೆದರಿಸಿ, ಅಪಾದಿತರ ಫೆಡರಲ್ ಬ್ಯಾಂಕ್‌ನ ಖಾತೆಗೆ 14 ಲಕ್ಷ ರೂಪಾಯಿ ಮತ್ತು ಯೆಸ್ ಬ್ಯಾಂಕ್ ಖಾತೆಗೆ ರೂಪಾಯಿ 10 ಲಕ್ಷ ಹಣವನ್ನು ಎಫ್‌ಡಿ ಖಾತೆಯಿಂದ ಆರ್‌ಟಿಜಿಎಸ್ ಮೂಲಕ ವಗಾ್ವಣೆ ಮಾಡಿಸಿಕೊಂಡಿರುವುದಾಗಿ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕರ್ನಾಟಕದಲ್ಲಿ ಹೆಚ್‌ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ : ಆರೋಗ್ಯ ಇಲಾಖೆ – vishwanews24

 

Leave a Reply