ಕಾರ್ಕಳ : ಕರುನಾಡ ಸಿರಿ ಪ್ರಶಸ್ತಿಗೆ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆ – vishwanews24
ಕಾರ್ಕಳ : ಕರುನಾಡ ಸಿರಿ ಪ್ರಶಸ್ತಿಗೆ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆ
ಕಾರ್ಕಳ : ಕಾರ್ಕಳ ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆಗೆ ನೀಡಲಾಗುವ ಕರುನಾಡ ಸಿರಿ ಪ್ರಶಸ್ತಿಗೆ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ಇದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ಘಟಕದ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ನ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಪ್ರಾಯೋಜಿತ ಪ್ರಶಸ್ತಿಯಾಗಿದೆ.
ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆ ಹಿರಿಮೆಯೊಂದಿಗೆ ಕಲ್ಯಾ ಶಾಲೆ 2023ರಲ್ಲಿ ಶತಮಾನೋತ್ಸವ ಆಚರಿಸಿಕೊಂಡಿದೆ. ಇದರೊಂದಿಗೆ ಯೋಧ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಅವರ ಸ್ಮಾರಕವನ್ನು ಶಾಲಾ ಆವರಣದಲ್ಲಿ ನಿರ್ಮಾಣಗೊಳಿಸಲಾಗಿದೆ.
ಡಿಕೆಶಿಯ ಅಧಿಕಾರ ಹಂಚಿಕೆ ಒಪ್ಪಂದ : ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ : ಸಿಎಂ ಸಿದ್ದರಾಮಯ್ಯ – vishwanews24
ಡಿ. 6ರಂದು ಪ್ರಶಸ್ತಿ ಪ್ರದಾನ
ಶಿರ್ಲಾಲಿನ ನಾಲ್ಕೂರು ನರಸಿಂಗರಾವ್ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಡಿ. 6ರಂದು ನಡೆಯುವ ಕಾರ್ಕಳ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ.
