ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ
ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಕಾರ್ಕಳ ವತಿಯಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು. ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ರೇಷನ್ ಕಾರ್ಡ್, ಪಿಂಚಣಿ ಹಾಗೂ ರಸ್ತೆ ನಿರ್ವಹಣೆಗೆ ಅಗತ್ಯ ಅನುದಾನ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಾಂಗ್ರೆಸ್ ಸರ್ಕಾರವನ್ನು “ಜೀರೋ ಬ್ಯಾಲೆನ್ಸ್ ಸರ್ಕಾರ, ಎಂದು ಟೀಕಿಸಿ ಆಕ್ರೋಶ ವ್ಯಕ್ತಪಡಿಸಿದರು.
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24
ಪ್ರತಿಭಟನೆಯಲ್ಲಿ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಯಾಲ್ ಸುವರ್ಣ, ಗುರುರಾಜ್ ಗಂಟೆಹೊಳೆ, ಕಿರಣ್ ಕೊಡಿ ಹಾಗೂ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
