ಕಾರ್ಕಳ ಪರಶುರಾಮ ಥೀಮ್ ಪಾರ್ಕ್ – ರಾಜ್ಯ ಸರ್ಕಾರ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ಸ್ವಾಗತಿಸುತ್ತೇನೆ : ಸುನಿಲ್ ಕುಮಾರ್ – Vishwanews24
ಪರಶುರಾಮ ಥೀಮ್ ಪಾರ್ಕ್ ಬಗ್ಗೆ ತನಿಖೆ ನಡೆಯಬೇಕೆಂದು ಆರು ತಿಂಗಳು ಹಿಂದೆಯೇ ನಾನು ಆಗ್ರಹಿಸಿದ್ದೆ..
ತನಿಖೆ ಪೂರ್ಣಗೊಳಿಸಿ ಥೀಂ ಪಾರ್ಕ್ ಅಭಿವೃದ್ಧಿಗೆ ನೀಡಿದ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು..
ಆದಷ್ಟು ಬೇಗ ಥೀಂ ಪಾರ್ಕ್ ಪ್ರವಾಸಿಗಳ ವೀಕ್ಷಣೆಗೆ ಮುಕ್ತಗೊಳ್ಳುವಂತಾಗಬೇಕೆಂದು ಒತ್ತಾಯಿಸುತ್ತೇನೆ..
ಸಿಐಡಿ ತನಿಖೆಗೆ ಒತ್ತಾಯ ಹಾಗೂ ಮುತುವರ್ಜಿ ತೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಶೇಷ ಧನ್ಯವಾದಗಳು..
ಉಡುಪಿ: ”ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ” ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಫೇಸ್ ಬುಕ್ ಪೋಸ್ಟ್ ಮಾಡಿರುವ ಸುನಿಲ್ ಕುಮಾರ್, ”ಈ ಬಗ್ಗೆ ತನಿಖೆ ನಡೆಯಬೇಕೆಂದು ಆರು ತಿಂಗಳು ಹಿಂದೆಯೇ ನಾನು ಆಗ್ರಹಿಸಿದ್ದೆ.ಸರಕಾರ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸುವ ಜತೆಗೆ ಥೀಂ ಪಾರ್ಕ್ ಅಭಿವೃದ್ಧಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಆದಷ್ಟು ಬೇಗ ಥೀಂ ಪಾರ್ಕ್ ಪ್ರವಾಸಿಗಳ ವೀಕ್ಷಣೆಗೆ ಮುಕ್ತಗೊಳ್ಳುವಂತಾಗಬೇಕೆಂದು ಒತ್ತಾಯಿಸುತ್ತೇನೆ” ಎಂದು ಬರೆದಿದ್ದಾರೆ.
”ಸಿಐಡಿ ತನಿಖೆಗೆ ಒತ್ತಾಯ ಹಾಗೂ ಮುತುವರ್ಜಿ ತೋರಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಶೇಷ ಧನ್ಯವಾದಗಳು” ಎಂದು ಕೊನೆಯಲ್ಲಿ ಸೇರಿಸಿದ್ದಾರೆ.
