ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ತನಿಖೆ ಆರಂಭವಾಗುವವರೆಗೆ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಲ್ಲ : ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನ- Vishwanews24
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ತನಿಖೆ ಆರಂಭವಾಗುವವರೆಗೆ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಲ್ಲ : ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನ
ಕಾರ್ಕಳ (vishwanews24): ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ತನಿಖೆಯು ಪ್ರಾರಂಭವಾಗುವವರೆಗೆ ಕಾಂಗ್ರೆಸ್ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನ ತಿಳಿಸಿದ್ದಾರೆ.
ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ತನಿಖೆಯು ಪ್ರಾರಂಭವಾಗುವ ವರೆಗೆ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಿರುವಂತೆ ನಿರ್ಧಾರವನ್ನು ಮಾಡಿದ್ದೇನೆ. ನನ್ನ ನಿರ್ಧಾರವು ಕಾರ್ಕಳದ ಸಾವಿರಾರು ನಿಷ್ಟಾವಂತ ಕಾರ್ಯಕರ್ತರ ನಿರ್ಧಾರವೂ ಆಗಿದೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.
