ಕಾಲೇಜಿಗೆ ದ್ವಿಚಕ್ರ ವಾಹನ, ಹಾಗೂ ಕಾರಿನಲ್ಲಿ ಹೋಗುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್ !!

Featured, ರಾಜ್ಯ ನ್ಯೂಸ್

ಬೆಂಗಳೂರು: ಕಾಲೇಜಿಗೆ ದ್ವಿಚಕ್ರ ವಾಹನ ಹಾಗೂ ಕಾರಿನಲ್ಲಿಹೋಗುವ ಮಂದಿಗೆ ಕಡಿವಾಣ ಹಾಕುವುದಕ್ಕೆ ರಾಜ್ಯ ಸರಕಾರ ಮುಂದಾಗಿದ್ದು, ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಪ್ರಕಟಣೆಯನ್ನು ರಾಜ್ಯ ಸರಕಾರ ಹೊರಡಿಸಲಿದೆ ಎನ್ನಲಾಗಿದೆ.

ಉನ್ನತ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ನಿರ್ಬಂಧಿಸಲು ,ಸಾರ್ವಜನಿಕ ಸಾರಿಗೆ ಉತ್ತೇಜಿಸಿ, ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಈ ಪ್ರಸ್ತಾವನೆ ಸಿದ್ಧಪಡಿಸುತ್ತಿದೆ.

ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಜಿ.ಟಿ.ದೇವೇಗೌಡ ಅವರು ಕಾಲೇಜಿನ ಕ್ಯಾಂಪಸ್ ಒಳಗೆ ವಿದ್ಯಾರ್ಥಿಗಳ ವಾಹನ ನಿಷೇಧಿಸುವ ಬಗ್ಗೆ ಕಾಲೇಜು ಮಂಡಳಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆ ಇದ್ದು ಈ ಸಭೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು, ಖಾಸಗಿ ಮತ್ತು ಡೀಮ್ಡ್ ವಿ.ವಿ ಪ್ರತಿನಿಧಿಗಳು, ವೃತ್ತಿಪರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಪೋಷಕರ ಸಭೆಗಳನ್ನು ನಡೆಸಲು ಮುಂದಾಗಿದ್ದು, ಸಭೆ ನಡೆದ ಬಳಿಕ ವಾಹನಗಳ ನಿಷೇಧದ ಬಗ್ಗೆ ಘೋಷಣೆ ಮಾಡಲಾಗುವುದು ಎನ್ನಲಾಗಿದೆ.

ವಿದ್ಯಾರ್ಥಿಗಳ ವಾಹನಗಳು ಅಪಘಾತಗಳಾಗುತ್ತಿರುವ ಹಿನ್ನೆಲೆಯಲ್ಲಿ ಕಾಲೇಜಿನ ಕ್ಯಾಂಪಸ್ ಒಳಗಡೆ ದ್ವಿಚಕ್ರ ಮತ್ತು ಕಾರುಗಳನ್ನು ನಿರ್ಬಂಧಿಸಲು ಇಲಾಖೆ ಚಿಂತನೆ ನಡೆಸಿದೆ.