ಕುಂದಾಪುರ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ – Vishwanews24
ಕುಂದಾಪುರ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ
ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಹರ್ಕೂರು ಗ್ರಾಮ (ಸಾಮಾನ್ಯ), ಜಪ್ತಿ ಗ್ರಾಮದ ಕರಿಕಲ್ ಕಟ್ಟೆ (ಸಾಮಾನ್ಯ) ಮತ್ತು ಯಡಮೊಗೆ ಗ್ರಾಮದ ಕೊಳಾಲಿ (ಎಸ್.ಟಿ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಕರ್ಕುಂಜೆ ಗ್ರಾಮದ ಹೆರ್ಜಾಡಿ (ಸಾಮಾನ್ಯ), ತೆಕ್ಕಟ್ಟೆ ಗ್ರಾಮ (ಸಾಮಾನ್ಯ), ತೆಕ್ಕಟ್ಟೆ ಗ್ರಾಮದ ಕೊಮೆ (ಸಾಮಾನ್ಯ), ಬೇಳೂರು ಗ್ರಾಮದ ದೇವಸ್ಥಾನಬೆಟ್ಟು (ಸಾಮಾನ್ಯ), ಹೆಸ್ಕತ್ತೂರು ಗ್ರಾಮ (ಸಾಮಾನ್ಯ), ಹರ್ಕೂರು ಗ್ರಾಮ (ಸಾಮಾನ್ಯ), ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಕೊಳನ್ಕಲ್ (ಸಾಮಾನ್ಯ), ವಾರ್ಡ್-3 ರ ಕರ್ನಾಟಕ ಟೈಲ್ಸ್ (ಸಾಮಾನ್ಯ), ಮೊಳಹಳ್ಳಿ ಗ್ರಾಮದ ಮಾಸ್ತಿಕಟ್ಟೆ (ಸಾಮಾನ್ಯ), ಅಮಾಸೆಬೈಲು ಗ್ರಾಮದ ಬಳ್ಮನೆ (ಸಾಮಾನ್ಯ), ಕುಳಂಜೆ ಗ್ರಾಮದ ಭರತ್ಕಲ್ (ಸಾಮಾನ್ಯ), ಯಡ್ತರೆ ಗ್ರಾಮದ ಕೊರಾಡಿ (ಎಸ್.ಟಿ) ಹಾಗೂ ಕೊಡ್ಲಾಡಿ ಗ್ರಾಮದ ಮಾರ್ಡಿ (ಎಸ್.ಟಿ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿ ಹುದ್ದೆಗಳ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ – Vishwanews24
ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಪಂಚಾಯತ್ ಹತ್ತಿರ, ಶಾಸ್ತಿçà ಪಾರ್ಕ್, ಕುಂದಾಪುರ ದೂ.ಸಂಖ್ಯೆ: 08254-230807 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
