ಕುಂದಾಪುರ : ಖಾಸಗಿ ಬಸ್ ಗೆ ಬೈಕ್ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – vishwanews24

Featured, ಉಡುಪಿ

ಕುಂದಾಪುರ : ಖಾಸಗಿ ಬಸ್ ಗೆ ಬೈಕ್ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು

ಕುಂದಾಪುರ : ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ.

ಮೃತ ಯುವಕನನ್ನು ಸೌಕೂರು ನಿವಾಸಿ ವಿಜಯ್ ದೇವಾಡಿಗ (26) ಎಂದು ಗುರುತಿಸಲಾಗಿದೆ.

ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ಹೊಂದಿದ್ದ ವಿಜಯ್ ಶನಿವಾರ ಬೆಳಿಗ್ಗೆ ಬೈಕಿನಲ್ಲಿ ತ್ರಾಸಿಯಿಂದ ಸೌಕೂರು ಕಡೆಗೆ ತೆರಳುತ್ತಿದ್ದಾಗ ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಖಾಸಗಿ ಬಸ್ ಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿಜಯ್ ಗಂಭೀರ ಗಾಯಗಳೊಂದಿಗೆ ಸ್ಥಳದಲ್ಲೇ ಕೊನೆಯುಸಿರಿಳೆದಿದ್ದಾರೆ.

ಕುಂದಾಪುರ :  9ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ  – vishwanews24

Leave a Reply