ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ -vishwanews24

Featured, ಉಡುಪಿ

ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ

ಕುಂದಾಪುರ : ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್‌ವೊಂದು ನೀರಿನ ಸೆಳೆತಕ್ಕೆ ಸಿಲುಕಿ ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಬುಧವಾರ ಮುಳುಗಡೆಯಾಗಿದ್ದು, 6 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

ಬೋಟ್‌ನಲ್ಲಿದ್ದ ಸುಮಾರು ಆರು ಮಂದಿ ಮೀನುಗಾರರನ್ನು ತಕ್ಷಣವೇ ರಕ್ಷಿಸಲಾಗಿದೆ. ಬಳಿಕ ಮುಳುಗಡೆಯಾಗಿದ್ದ ಬೋಟ್ ಅನ್ನು ಯಶಸ್ವಿಯಾಗಿ ದಡಕ್ಕೆ ತರಲಾಯಿತು.

ಇದೇ ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಕಳೆದ ವಾರವೂ ಮೀನುಗಾರಿಕಾ ಬೋಟ್‌ವೊಂದು ಭಾರೀ ಅಲೆಗಳಿಗೆ ಸಿಲುಕಿ ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಆ ಸಂದರ್ಭದಲ್ಲಿ ಕೂಡ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಬೋಟ್‌ನಲ್ಲಿದ್ದ ಎಲ್ಲಾ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು.

ಕಳೆದ ವಾರದ ಘಟನೆ ಮಾಸುವ ಮುನ್ನವೇ ಬುಧವಾರ ಅದೇ ಪ್ರದೇಶದಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಅಪಾಯಕ್ಕೆ ಸಿಲುಕಿರುವುದು ಸ್ಥಳೀಯ ಮೀನುಗಾರರಲ್ಲಿ ಆತಂಕ ಹೆಚ್ಚಿಸಿದೆ. ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಪದೇಪದೆ ಇಂತಹ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರು ಸುರಕ್ಷತಾ ಕ್ರಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

Leave a Reply