ಕುಂದಾಪುರ: ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ಪತ್ತೆ – Vishwanews24

Featured, ದಕ್ಷಿಣ ಕನ್ನಡ

ಕುಂದಾಪುರ: ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ಪತ್ತೆ

ಕುಂದಾಪುರ: ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಗೆ ಸ್ನೇಹಿತರೊಂದಿಗೆ ಜಲಕ್ರೀಡೆಯಾಡಲೆಂದು ಹೋಗಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ಶನಿವಾರ ಪತ್ತೆಯಾಗಿದೆ.

ಸುಳ್ಯದ ನಿವಾಸಿ ಸುಹಾಸ್ ಎಂ (21) ಮೃತ ಯುವಕ.

ಮೇ 5 ರಂದು ಸೌಡ ಸಮೀಪದ ಹೊಳೆಯಲ್ಲಿ ನೀರಿಗಿಳಿದ ಸುಹಾಸ್ ಆಕಸ್ಮಿಕವಾಗಿ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಜೊತೆಗಿದ್ದ ಯುವಕರು ತಕ್ಷಣ ಸ್ಥಳೀಯರಿಗೆ ಸುದ್ಧಿ ತಲುಪಿಸಿ ಹುಡುಕಾಟ ಆರಂಭಿಸಿದ್ದಾರೆ.

ಕಾಪು: ಬೋಟ್‌ನಿಂದ ಆಯ ತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು – Vishwanews24

ಇನ್ನು ಶನಿವಾರ ಬೆಳಗ್ಗೆ ಸುಹಾಸ್ ಮೃತದೇಹ ಮುಳುಗಿದ ಸ್ಥಳದಿಂದ ಸುಮಾರು 200 ಮೀಟರ್ ದೂರದಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕೋಟ ಪೊಲೀಸರು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಸುಹಾಸ್ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಬೆಳಿಗ್ಗೆಯಷ್ಟೇ ತನ್ನ ಮನೆಯಾದ ಐವರ್ನಾಡಿನ ಮಡ್ತಿಲದಿಂದ ಮೂಡಬಿದ್ರೆಗೆ ಬಂದಿದ್ದ. ಅಲ್ಲಿಂದ ಸ್ನೇಹಿತರೊಂದಿಗೆ ಸೌಡ ಹೊಳೆಗೆ ಆಟವಾಡಲು ಬಂದಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು: ಬೋಟ್‌ನಿಂದ ಆಯ ತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು – Vishwanews24

Leave a Reply