ಕುಂದಾಪುರ : ಪರಿಚಯದ ಯುವತಿ ಜೊತೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಬಸ್ಸಿನಲ್ಲೇ ಹಲ್ಲೆ – Vishwanews24
ಕುಂದಾಪುರ : ಪರಿಚಯದ ಯುವತಿ ಜೊತೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಬಸ್ಸಿನಲ್ಲೇ ಹಲ್ಲೆ – Vishwanews24
ಕುಂದಾಪುರ: ಐಟಿಐ ಕಾಲೇಜಿನ ವಿದ್ಯಾರ್ಥಿಗೆ ಪರಿಚಯದ ಯುವತಿ ಜೊತೆ ಮಾತನಾಡಿದ್ದಕ್ಕೆ ನಾಲ್ವರು ಯುವಕರು ಬಸ್ಸಿನಲ್ಲೇ ಹಲ್ಲೆ ನಡೆಸಿರುವ ಘಟನೆ ಹಾಲಾಡಿಯಿಂದ ವರದಿಯಾಗಿದೆ.
ಶಶಾಂಕ್ ಹಲ್ಲೆಗೊಳಗಾದ ವಿದ್ಯಾರ್ಥಿ. ಈತ ಬಿದ್ಕಲಕಟ್ಟೆ ಐಟಿಐ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ.
ಶಶಾಂಕ್, ಪ್ರಜ್ವಲ್, ಗಣೇಶ್ ಜೊತೆ ಬಸ್ಸಿನಲ್ಲಿ ತೆರಳುತ್ತಿರುವಾಗ ಯುವತಿ ಜೊತೆ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ನಾಲ್ವರು ಶಶಾಂಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಾಳು ವಿದ್ಯಾರ್ಥಿ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ಸಿಪಿಐ ಗೋಪಿಕೃಷ್ಣ, ಪಿಎಸ್ಐ ಸದಾಶಿವ ಗವರೋಜಿ ಮೊದಲಾದವರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ :
ಬೆಂಗಳೂರು:ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿದ್ದ ಮಸೀದಿ ತೆರವು – Vishwanews24
