ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24
ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ
ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ ವಿವಿಧ ದೂರುಗಳ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿತು.
ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್ ಹಾಗೂ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಕಲೆಹಾಕಿತು.
ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24
ಸರ್ಕಾರಿ ಸೌಲಭ್ಯ ಒದಗಿಸುವುದಾಗಿ ಪಿಡಿಒ ಅವರು ಸುಮಾರು 400 ಅರ್ಜಿಗಳನ್ನು ಪಡೆದಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಕುರಿತು ಅಧಿಕಾರಿಗಳು ಮಾಹಿತಿ ಪರಿಶೀಲಿಸಿದರು.
ಬೇಳೂರು ಗ್ರಾ.ಪಂ. ವ್ಯಾಪ್ತಿಯ ಕಲ್ಲು ಕೋರೆಗಳಿಗೂ ಲೋಕಾಯುಕ್ತ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಈ ಪರಿಶೀಲನಾ ಕಾರ್ಯಾಚರಣೆ ನಡೆದಿದ್ದು, ಪಂಚಾಯಿತಿಯ ವಿವಿಧ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24
