ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು
ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಕುಂದಾಪುರ ತಾಲೂಕು ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ (68) ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಮಂಗಳವಾರ ರಾತ್ರಿ ತಲ್ಲೂರಿನ ಹೆದ್ದಾರಿಯಲ್ಲಿ ಬೈಕ್ ಗಳೆರಡು ಢಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಶ್ರೀನಿವಾಸ ಗಾಣಿಗ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಯಿತಾದರೂ ಅದಾಗಲೇ ಸಾವನ್ನಪ್ಪಿದ್ದರು.
ಇದನ್ನೂ ಓದಿ:
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24
ಶ್ರೀನಿವಾಸ ಗಾಣಿಗ ಅವರು ಪಂಚಾಯತ್ ರಾಜ್ ಹಕ್ಕೊತ್ತಾಯ ಆಂದೋಲನದ ಸಕ್ರೀಯ ಕಾರ್ಯಕರ್ತರಾಗಿದ್ದು, ನಮ್ಮ ಭೂಮಿ ಸ್ವಯಂ ಸೇವಾ ಸಂಸ್ಥೆಯಲ್ಲಿ 15 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದರು.
ಮೃತರು ಪತ್ನಿ ಹಟ್ಟಿಯಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ಲಲಿತಾ ಗಾಣಿಗ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
