ಕುಂದಾಪುರ : ಸರ್ಕಾರದ ಆದೇಶವಿದ್ರೂ ಕಾಲೇಜಿಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ; ಗೇಟ್ ಬಳಿ ತಡೆದ ಪ್ರಾಂಶುಪಾಲರು – Vishwanews24
ಕುಂದಾಪುರ: ಸರ್ಕಾರದ ಆದೇಶವಿದ್ರೂ ಕಾಲೇಜಿಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ; ಗೇಟ್ ಬಳಿ ತಡೆದ ಪ್ರಾಂಶುಪಾಲರು – Vishwanews24
ಸರ್ಕಾರದ ಆದೇಶದಲ್ಲಿ ಕುಂದಾಪುರ ಕಾಲೇಜು ಉಲ್ಲೇಖವಿಲ್ಲ ಎಂದು ವಿದ್ಯಾರ್ಥಿನಿಯರ ವಾದ ..
ಕುಂದಾಪುರ: ಸರ್ಕಾರದ ಆದೇಶವಿದ್ದರೂ ಕಾಲೇಜಿಗೆ ಹಿಜಾಬ್ ಧರಿಸಿ ಬಂದಿದ್ದರಿಂದ ವಿದ್ಯಾರ್ಥಿನಿಯರು ಮತ್ತು ಪ್ರಾಂಶುಪಾಲರ ನಡುವೆ ವಾಗ್ವಾದ ಉಂಟಾದ ಘಟನೆ ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.
ಹಿಜಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಗೆ ತೆರಳದಂತೆ ಪ್ರಾಂಶುಪಾಲರು ಕಾಲೇಜಿನ ಗೇಟ್ ಬಳಿ ತಡೆದರು. ಬಳಿಕ ಹಿಜಾಬ್ ಕಳಚಿ ಕ್ಲಾಸ್ಗೆ ಬರುವಂತೆ ಸೂಚಿಸಿದರು.
ಇದನ್ನೂ ಓದಿ :
ಕುಂದಾಪುರ ಸರಕಾರಿ ಜೂನಿಯರ್ ಕಾಲೇಜಿನಲ್ಲೂ ಹಿಜಾಬ್ ವಿವಾದ – Vishwanews24
ಈ ವೇಳೆ ಗೇಟ್ ಬಳಿ ಪ್ರಾಂಶುಪಾಲರ ಜೊತೆ ವಾಗ್ವಾದಕ್ಕಿಳಿದ ವಿದ್ಯಾರ್ಥಿನಿಯರು ಸರ್ಕಾರದ ಆದೇಶದಲ್ಲಿ ಕುಂದಾಪುರ ಕಾಲೇಜು ಉಲ್ಲೇಖವಿಲ್ಲ ಎಂದು ವಾದಿಸಿದರು. ಆದರೆ, ಸರಕಾರ ಇಡೀ ರಾಜ್ಯಕ್ಕೆ ಸುತ್ತೋಲೆ ಹೊರಡಿಸಿದೆ ಎಂದು ಪ್ರಾಂಶುಪಾಲರು ಉತ್ತರಿಸಿದರು.
ಸದ್ಯ ಈ ವಿವಾದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಿಕ್ಕಾಟಕ್ಕೆ ಕಾರಣವಾಗಿದೆ.
ಇದನ್ನೂ ಓದಿ :
ಮಂಗಳೂರು : ವಾಹನ ಚಲಾಯಿಸುತ್ತಿದ್ದ ಸಂದರ್ಭ ಹೃದಯಾಘಾತ : ಟ್ಯಾಕ್ಸಿ ಚಾಲಕ ಸಾವು – Vishwanews24
